Thu. Dec 26th, 2024

ಪರಿಸರ ಸಮತೋಲನಕ್ಕೆ ಉರಗ ಸಂತತಿಯ ಉಳಿವು ಮುಖ್ಯ:ಸ್ನೇಕ್ ಶಾಮ್

Share this with Friends

ಮೈಸೂರು, ಜು.16: ವಿಶ್ವ ಹಾವು ಗಳ ದಿನಾಚರಣೆ ಅಂಗವಾಗಿ 85000 ಸಾವಿರಕ್ಕೂ ಹೆಚ್ಚು ಹಾವುಗಳನ್ನು ಸಂರಕ್ಷಿಸಿದ ಉರುಗ ತಜ್ಞ ಸ್ನೇಕ್ ಶಾಮ್ ಅವರನ್ನು ಮೈಸೂರಿನಲ್ಲಿ ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು.

ಕೆಎಂಪಿಕೆ ಚಾರಿಟೇಬಲ್ ಟ್ರಸ್ಟ್ ಹಾಗೂ ಜೀವದಾರ ರಕ್ತ ನಿಧಿ ಕೇಂದ್ರದ ವತಿಯಿಂದ ನಗರದ ಲಕ್ಷ್ಮಿಪುರಂ ನಲ್ಲಿರುವ ಕಚೇರಿಯಲ್ಲಿ ವಿಶ್ವ ಹಾವುಗಳ ದಿನಾಚರಣೆ ಆಚರಿಸಲಾಯಿತು.

ಈ ವೇಳೆ ಸನ್ಮಾನ ಸ್ವೀಕರಿಸಿ ಮಾತನಾಡಿದ ಉರಗತಜ್ಞ ಸ್ನೇಕ್ ಶ್ಯಾಮ್ ಅವರು,
ಪರಿಸರ ಸಮತೋಲನಕ್ಕೆ ಉರಗ ಸಂತತಿಯ ಉಳಿವು ಅತಿ ಮುಖ್ಯ ಎಂದು ಹೇಳಿದರು.

ಪ್ರತಿಯೊಬ್ಬರೂ ತಮ್ಮ ಮನೆಯ ಸುತ್ತಮುತ್ತಲಿನ ಉಪಯುಕ್ತ ಸ್ಥಳದಲ್ಲಿಯೇ ಗಿಡಗಳನ್ನು ನೆಟ್ಟು ಬೆಳೆಸಿದರೆ ಪರಿಸರವನ್ನು ಶುದ್ಧವಾಗಿಸುವ ಅಲ್ಪ ಸೇವೆಯನ್ನು ಮಾಡಿದಂತಾಗುತ್ತದೆ ಎಂದು ತಿಳಿಸಿದರು.

ಪರಿಸರದಲ್ಲಿರುವ ಪ್ರತಿಯೊಂದು ಜೀವಿಯೂ ಒಂದನ್ನೊಂದು ಅವಲಂಬಿಸಿಯೇ ಬದುಕುವ ಕಾರಣ ಪ್ರತಿಯೊಂದಕ್ಕೂ ಪ್ರಾಮುಖ್ಯತೆಯಿದೆ ಹಾಗಾಗಿ ಎಲ್ಲವನ್ನೂ ಗೌರವಿಸಿ ಎಂದು ಹೇಳಿದರು.

ಉರಗ ಪ್ರಭೇದಗಳು, ಅವುಗಳ ಸಂತತಿ, ಹಾವಿನ ಕಡಿತದ ಬಳಿಕ ನಡೆಸುವ ಪ್ರಥಮ ಚಿಕಿತ್ಸೆಗಳ ಕುರಿತು ಸ್ನೇಕ್ ಶ್ಯಾಮ್ ಮಾಹಿತಿ ನೀಡಿದರು.

ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣ ಗೌಡ ಮಾತನಾಡಿ,
ಪರಿಸರ ಸಂರಕ್ಷಣೆ ವಿಚಾರವಾಗಿ ಪಠ್ಯಪುಸ್ತಕಗಳಲ್ಲಿ ಸ್ನೇಕ್ ಶ್ಯಾಮ್ ಅವರ ಸೇವೆ ಮತ್ತು ಪರಿಸರ ಕಾಳಜಿಯ ವಿಷಯದ ಬಗ್ಗೆ ರಾಜ್ಯ ಸರ್ಕಾರ ಅಳವಡಿಸಿ ಸಣ್ಣಮಕ್ಕಳಲ್ಲಿ ಉರಗ ಮತ್ತು ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.

ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ, ನಜರ್ಬಾದ್ ನಟರಾಜ್, ಕೆ ಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಜಿ.ರಾಘವೇಂದ್ರ,
ಪ್ರಕಾಶ್ ಪ್ರಿಯದರ್ಶನ್, ಪರಮೇಶ್ ಗೌಡ,
ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಅಜಯ್ ಶಾಸ್ತ್ರಿ, ಕೆ ಎಂ ನಿಶಾಂತ್, ಅಪೂರ್ವ ಸುರೇಶ್, ಬೈರತಿ ಲಿಂಗರಾಜು, ಸುಚಿಂದ್ರ, ಚಕ್ರಪಾಣಿ, ಎಸ್ ಎನ್ ರಾಜೇಶ್, ಸದಾಶಿವ್, ಸಚಿನ್ ನಾಯಕ್, ಸಫಿ, ರಾಕೇಶ್ ಮತ್ತಿತರರು ಹಾಜರಿದ್ದರು.


Share this with Friends

Related Post