ಮೈಸೂರು,ಮೇ.3: ಪ್ರಸ್ತುತ ಬಿಸಿಲಿನ ತಾಪ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು,
ಸಾರ್ವಜನಿಕರು ಆರೋಗ್ಯದ ಕಡೆ ಗಮನ ಕೊಡಬೇಕೆಂದು ಬಿಜೆಪಿ ವೈದ್ಯಕೀಯ ಪ್ರಕೋಸ್ಟ ಸಂಚಾಲಕ ಗಿರೀಶ್ ಕೋರಿದ್ದಾರೆ.
ಹೆಚ್ಚು ತಾಪದ ಹಿನ್ನೆಲೆಯಲ್ಲಿ ಹೀಟ್ ವೇವ್ ಸ್ಟೋಕ್ ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿ ಕಾರವು ನೀಡಿದ ಮುಂಜಾಗ್ರತಾ ಕ್ರಮಗಳನ್ನು ಸಾರ್ವಜನಿಕರು ಪಾಲಿಸುವಂತೆ ಗಿರೀಶ್ ಮನವಿ ಮಾಡಿದ್ದಾರೆ.
ಸಾರ್ವಜನಿಕರು ರೇಡಿಯೋ, ಟಿವಿ, ದಿನ ಪತ್ರಿಕೆಗಳಲ್ಲಿ ಬರುವ ಅತಿಯಾದ ಬಿಸಿಲಿನ ಕುರಿತು ಮುನ್ಸೂಚನೆಗಳನ್ನು ತಿಳಿದುಕೊಳ್ಳಬೇಕು, ಬಾಯಾರಿಕೆಯಿಲ್ಲದಿದ್ದರೂ ಹೆಚ್ಚಾಗಿ ನೀರನ್ನು ಕುಡಿಯಬೇಕು, ತೆಳುವಾದ ಸಡಿಲವಾದ ಹತ್ತಿಯ ಉಡುಪುಗಳನ್ನು ಧರಿಸಿ, ಆದಷ್ಟು ಬಿಳಿ ಬಣ್ಣದ ಬಟ್ಟೆಗಳ ಬಳಕೆ ಒಳ್ಳೆಯದು ಬಿಸಿಲಿನಲ್ಲಿ ಹೊರಗೆ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಟೋಪಿ, ಬೂಟುಗಳು ಅಥವಾ ಚಪ್ಪಲಿಗಳನ್ನು ಬಳಸಬೇಕು ಎಂದು ಸಲಹೆ ನೀಡಿದ್ದಾರೆ.
ಎಲ್ಲಿಗೇ ಹೋದರೂ ನಿಮ್ಮೊಂದಿಗೆ ನೀರನ್ನು ತೆಗೆದುಕೊಂಡು ಹೋಗುವುದು ಉತ್ತಮ, ಹೊರಗೆ ಕೆಲಸ ಮಾಡುತ್ತಿದ್ದರೆ, ಟೋಪಿ ಅಥವಾ ಛತ್ರಿಯನ್ನು ಬಳಸಿ ಮತ್ತು ನಿಮ್ಮ ತಲೆ, ಕುತ್ತಿಗೆ, ಮುಖ ಮತ್ತು ಕೈ, ಕಾಲುಗಳ ಮೇಲೆ ಒದ್ದೆ ಬಟ್ಟೆಯನ್ನು ಬಳಸಿ ಎಂದು ಅವರು ಮನವಿ ಮಾಡಿದ್ದಾರೆ.