Sat. Nov 2nd, 2024

ವಿಕಲಚೇತನ ಕಾರ್ಯಕರ್ತರ ಬಳಿಗೇ ಹೋಗಿ ಅಹವಾಲು ಆಲಿಸಿದ ಸಿಎಂ

Share this with Friends

ಬೆಂಗಳೂರು, ಜು.13: ಮುಖ್ಯಮಂತ್ರಿಗಳಾದ ಬಳಿಕ ಕೆಪಿಸಿಸಿ ಕಚೇರಿಯಲ್ಲಿ ಇದೇ ಮೊದಲ‌ ಬಾರಿಗೆ ಸಿದ್ದರಾಮಯ್ಯ ಅವರು ಕಾರ್ಯಕರ್ತರ ಅಹವಾಲು ಸ್ವೀಕಾರ ಪ್ರಾರಂಭಿಸಿದ್ದು,ಎಲ್ಲೆಲ್ಲೂ ಉತ್ಸಾಹ ಮನೆ ಮಾಡಿತ್ತು.

ವಿಶೇಷವೆಂದರೆ ವಿಕಲಚೇತನರ ಬಳಿಗೇ ಹೋಗಿ ಅಹವಾಲುಗಳನ್ನು ಸ್ವೀಕರಿಸುವ ಮೂಲಕ ಮುಖ್ಯಮಂತ್ರಿಗಳು ಅಹವಾಲು ಸ್ವೀಕಾರ ಅಭಿಯಾನಕ್ಕೆ ಚಾಲನೆ ನೀಡಿದರು.

ತ್ರಿಚಕ್ರ ವಾಹನ, ಸರ್ಕಾರಿ ಉದ್ಯೋಗ,ನಿಗಮ ಮಂಡಳಿಯಲ್ಲಿ ಅವಕಾಶ, ಗುತ್ತಿಗೆ ನೌಕರಿ, ಸ್ವಂತ ಉದ್ಯೋಗಕ್ಕೆ ಅನುದಾನ, ಸಾಲದ ಸವಲತ್ತು ಹೀಗೆ ಹಲವಾರು ಬೇಡಿಕೆಗಳನ್ನು ವಿಕಲಚೇತನ ಕಾಂಗ್ರೆಸ್ ಕಾರ್ಯಕರ್ತರು ಮುಖ್ಯಮಂತ್ರಿಗಳ ಮುಂದಿಟ್ಟರು.

ಪ್ರತಿಯೊಬ್ಬ ಕಾರ್ಯಕರ್ತರ ಅಹವಾಲು ಮತ್ತು ಪಕ್ಷ ಸಂಘಟನೆಯಲ್ಲಿ ಅವರು ತೊಡಗಿಸಿಕೊಂಡಿರುವ ಬಗ್ಗೆ ಸಿದ್ದರಾಮಯ್ಯ
ವಿವರವಾಗಿ ಕೇಳಿ ತಿಳಿದುಕೊಂಡರು.

ಬಳಿಕ ತಮ್ಮ ಸಿಬ್ಬಂದಿಗೆ ಅಹವಾಲುಗಳನ್ನು ಪಟ್ಟಿ ಮಾಡಿಕೊಂಡು ಸಂಬಂಧಪಟ್ಟ ಅಧಿಕಾರಿಗಳ ಮೂಲಕ ಬೇಡಿಕೆ ಈಡೇರಿಸುವಂತೆ ಸ್ಪಷ್ಟ ಸೂಚನೆ ನೀಡಿದರು.

ತಕ್ಷಣ ಬಗೆಹರಿಸಬಹುದಾದ ಬೇಡಿಕೆಗಳನ್ನು ಈಗಲೇ ಬಗೆಹರಿಸಲು ಅಧಿಕಾರಿ ಮತ್ತು ಸಿಬ್ಬಂದಿಗೆ ಸ್ಥಳದಲ್ಲೇ ಸಿದ್ದು ಸೂಚಿಸಿದರು.


Share this with Friends

Related Post