Thu. Dec 26th, 2024

ನೀತಿ ಸಂಹಿತೆ ಸಡಿಲವಾಗಿದೆ;ಅಭಿವೃದ್ಧಿ ಕಡೆ‌ ಗಮನ ಹರಿಸಿ:ಅಧಿಕಾರಿಗಳಿಗೆ ಸಿಎಂ ಖಡಕ್‌ ಸೂಚನೆ

Share this with Friends

ಬೆಂಗಳೂರು, ಮೇ.23: ಸಿಎಂ ಸಿದ್ದರಾಮಯ್ಯ ಅವರು ಬರ ಹಾಗೂ ಮುಂಗಾರು ಕೃಷಿ ಚಟುವಟಿಕೆ ಕುರಿತು ಎಲ್ಲ ಜಿಲ್ಲಾಧಿಕಾರಿಗಳು, ಜಿ ಪಂ ಸಿಇಒ ಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.

ಚುನಾವಣಾ ನೀತಿ ಸಂಹಿತೆ ಸಮಯ ದೀರ್ಘವಾಗುದ್ದರಿಂದ ಆಡಳಿತ ಯಂತ್ರ ಸ್ಥಗಿತವಾದಂತೆ ಆಗಿದ್ದು,
ಅಭಿವೃದ್ಧಿ ಕೆಲಸಗಳಿಗೆ ಗಮನ ಹರಿಸಲು ಅಧಿಕಾರಿಗಳಿಂದ ಸಾಧ್ಯ ಆಗಿರಲಿಲ್ಲ,
ನಮ್ಮ ಮನವಿ ಮೇರೆಗೆ ಚುನಾವಣಾ ಆಯೋಗ ನೀತಿ ಸಂಹಿತೆ ಸಡಿಲಿಸಿದೆ,ಸಧ್ಯ
ಮಳೆ ವಾಡಿಕೆಗಿಂತ ಅಧಿಕವಾಗಿದೆ,
ಕೃಷಿ ಚಟುವಟಿಕೆ ಆರಂಭವಾಗಿದೆ ಎಂದು ಈ‌ ವೇಳೆ‌ ಸಿದ್ದರಾಮಯ್ಯ ತಿಳಿಸಿದರು.

ನೀತಿ ಸಂಹಿತೆ ಜೂನ್ ಆರರ ವರೆಗೆ ಇದೆ. ಆದರೂ ತುರ್ತು ಕೆಲಸಗಳಿಗೆ ಗಮನ ನೀಡಬೇಕು,ಜಿಲ್ಲಾ ಮಟ್ಟದ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಸಿಎಂ ಆದೇಶಿಸಿದರು.

ಬಜೆಟ್ ಘೋಚಣೆಗಳಿಗೆ ಸಂಬಂಧಿಸಿದಂತೆ ಜೂನ್ ಕೊನೆಯ ವೇಳೆಗೆ ಆದೇಶ ಹೊರ ಬರಬೇಕು ಕಾಮಗಾರಿಗಳಿಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆ ಕೂಡ ಶೀಘ್ರವಾಗಿ ಆಗಬೇಕು,ನೀತಿ ಸಂಹಿತೆ ಸಡಿಲವಾಗಿರುವುದರಿಂದ ಅಧಿಕಾರಿಗಳು ಅಭಿವೃದ್ಧಿ ಕಡೆ ಹೆಚ್ಚಿನ ಗಮನ ಹರಿಸಬೇಕು ಎಂದು ಕಡಕ್ಕಾಗಿ‌ ಸೂಚಿಸಿದರು.

ಮೈಸೂರಿನ ಎರಡು ಗ್ರಾಮಗಳಲ್ಲಿ ಕಾಲರಾ ಕಂಡು ಬಂದಿದೆ, ಇದಕ್ಕೆ ಕಾರಣ ಕಲುಷಿತ ನೀರು ನೀರು ಕಲುಷಿತಗೊಳ್ಳಲು ಇಂಜಿನಿಯರುಗಳು ಕಾರಣ ಕುಡಿಯಲು ನೀರು ಯೋಗ್ಯವೇ ಅಲ್ಲವೇ ಎಂಬುದನ್ನು ಪತ್ತೆ ಮಾಡದಿರುವುದು ದೊಡ್ಡ ಅಪರಾಧ ಎಂದು ಸಿಎಂ ತರಾಟೆಗೆ ತೆಗೆದುಕೊಂಡರು.

ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ರೀತಿಯ ಘಟನೆ ಸಂಭವಿಸಿದೆ. ಇದಕ್ಕೆ ಯಾರು ಜವಾಬ್ದಾರಿ. ಕುಡಿಯುವ ನೀರಿನ ಪರೀಕ್ಷೆ ನಿತ್ಯವೂ ಆಗಬೇಕು, ಜಿಲ್ಲಾ ಮಟ್ಟದ ಅಧಿಕಾರಿಗಳೇ ಇದಕ್ಕೆ ಹೊಣೆ ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಲಾಗುವುದು ಎಂದು ಕಡಕ್ ಎಚ್ಚರಿಕೆ ನೀಡಿದರು.

ಇನ್ನು ಮುಂದೆ ಕಲುಷಿತ ನೀರಿನಿಂದ ತೊಂದರೆ ಆದರೆ ಆಯಾ ಜಿಲ್ಲಾಧಿಕಾರಿಗಳೇ ನೇರ ಹೊಣೆ, ಕಾಲರ ಕಂಡು ಬಂದರೆ ಸಂಬಂಧಿಸಿದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ ಕ್ರಮ ಜರುಗಿಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.

ಸಕಾಲದಲ್ಲಿ ರೈತರಿಗೆ ಸಾಲ ಸಿಗುವುದನ್ನು ಖಾತರಿಪಡಿಸಬೇಕು, ಈ ವರ್ಷದ ಸಾಲ ಯೋಜನೆ ಕಳುಹಿಸಲಾಗಿದೆ. ಜಿಲ್ಲಾ ಬ್ಯಾಂಕರುಗಳೊಂದಿಗೆ ಸಮನ್ವಯ ವಹಿಸಿ, ಕ್ರಮ ಕೈಗೊಳ್ಳಬೇಕೆಂದು ಸಿದ್ದು ಸೂಚಿಸಿದರು.

ಬರ ಪರಿಹಾರ ಮೊತ್ತವನ್ನು ರೈತರ ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಬ್ಯಾಂಕರುಗಳಿಗೆ‌ ಸಿಎಂ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಸಚಿವರಾದ ಹೆಚ್.ಕೆ. ಪಾಟೀಲ್‌, ಕೆ.ಹೆಚ್.‌ ಮುನಿಯಪ್ಪ, ಚೆಲುವರಾಯಸ್ವಾಮಿ, ಬೈರತಿ ಸುರೇಶ್‌, ಶಿವರಾಜ್‌ ತಂಗಡಗಿ, ಪ್ರಿಯಾಂಕ್‌ ಖರ್ಗೆ, ರಹೀಂ ಖಾನ್‌, ಶಿವಾನಂದ ಪಾಟೀಲ, ಎಸ್.‌ ಎಸ್.‌ ಮಲ್ಲಿಕಾರ್ಜುನ್‌, ಸಂತೋಷ್‌ ಲಾಡ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌ ಹಾಗೂ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.


Share this with Friends

Related Post