Sat. Apr 19th, 2025

ಪತಿಯಿಂದಲೇ ಕಾಂಗ್ರೆಸ್ ಮುಖಂಡೆಯ ಹತ್ಯೆ

Share this with Friends

ಮೈಸೂರು, ಮೇ. 21: ಮೈಸೂರು ಜಿಲ್ಲೆ ಬನ್ನೂರಿನ ತುರಗನೂರಿನಲ್ಲಿ ಕಾಂಗ್ರೆಸ್ ಮುಖಂಡೆ ವಿದ್ಯಾರನ್ನ ಪತಿಯೇ ಭೀಕರವಾಗಿ ಹತ್ಯೆ ಮಾಡಿದ್ದಾನೆ.

ಕಾಂಗ್ರೆಸ್ ನಲ್ಲಿ ಸಕ್ರಿಯರಾಗಿದ್ದ
ವಿದ್ಯಾ ಕೊಲೆಯಾಗಿದ್ದು,ಕೌಟುಂಬಿಕ ಕಲಹದ ಹಿನ್ನೆಲೆ ಕೊಲೆಯಾಗಿರಬಹುದು ಎಂದು ಪೊಲೀಸರು‌ ತಿಳಿಸಿದ್ದಾರೆ.

ವಿದ್ಯಾ ಪತಿ ನಂದೀಶ್ ಪತ್ನಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದಾನೆ.

ವಿದ್ಯಾ ಮೈಸೂರಿನ ಶ್ರೀರಾಂಪುರ ನಿವಾಸಿಯಾಗಿದ್ದು ನಂದೀಶ್ ರನ್ನ ವಿವಾಹವಾಗಿದ್ದರು.ಅವರಿಗೆ ಇಬ್ಬರು ಮಕ್ಕಳಿ ದ್ದಾರೆ.

ಕಾಂಗ್ರೆಸ್ ಪಕ್ಷದ ಮೈಸೂರು ನಗರ ಪ್ರಧಾನ ಕಾರ್ಯದರ್ಶಿಯಾಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ವಿದ್ಯಾ ಜವಾಬ್ದಾರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ,ಅಲ್ಲದೆ ಹಲವಾರು ಕನ್ನಡ ಚಿತ್ರಗಳಲ್ಲೂ ನಟಿಸಿದ್ದಾರೆ.

ದಂಪತಿ ನಡುವೆ ಸಾಮರಸ್ಯ ಇರಲಿಲ್ಲವೆಂದೂ ಆಗಾಗ ಜಗಳ ನಡೆಯುತ್ತಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.

ಇತ್ತೀಚೆಗೆ ಕಾಂಗ್ರೆಸ್ ನಾಯಕರು ವಿದ್ಯಾಗೆ ಮತ್ತೊಂದು ಗುರುತರ ಜವಾಬ್ದಾರಿ ನೀಡಲು ಮುಂದಾಗಿದ್ದರೆಂದು ಗೊತ್ತಾಗಿದೆ,ಅಷ್ಟರಲ್ಲೇ ಆಕೆ ಕೊಲೆಯಾಗಿರುವುದು ದುರ್ದೈವ.

ಸೋಮವಾರ ತಡರಾತ್ರಿಯಲ್ಲಿ ವಿದ್ಯಾ ಬನ್ನೂರಿನ ತುರಗನೂರಿನಲ್ಲಿದ್ದ ಪತಿ ಮನೆಗೆ ಹೋಗಿದ್ದರು,ಆಗ ದಂಪತಿ ನಡುವೆ
ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ಹೋಗಿ ಪತ್ನಿ ತಲೆಗೆ ನಂದೀಶ್ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದಾನೆ.

ಸ್ಥಳಕ್ಕೆ ಎಸ್ಪಿ ಸೀಮಾ ಲಾಟ್ಕರ್, ಅಡಿಷನಲ್ ಎಸ್ಪಿ ನಂದಿನಿ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು,ನಂದೀಶ್ ನನ್ನು ಬಂಧಿಸಲು ಬನ್ನೂರು ಪೊಲೀಸರು ಬಲೆ ಬೀಸಿದ್ದಾರೆ.


Share this with Friends

Related Post