Mon. Dec 23rd, 2024

ಬೆದರಿಕೆ ಹಿನ್ನೆಲೆ 2 ಗಂಟೆ ತಡವಾಗಿ ಹೊರಟ ಮೈಸೂರು- ಅಯೋಧ್ಯಾ ಧಾಮ ರೈಲು

Share this with Friends

ವಿಜಯನಗರ,ಫೆ.23: ರೈಲಿಗೆ ಬೆಂಕಿ ಹಚ್ಚುತ್ತೇನೆ ಎಂದು ಯುವಕ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಮೈಸೂರು- ಅಯೋಧ್ಯಾ ಧಾಮ ರೈಲು 2 ಗಂಟೆ ಸ್ಥಗಿತಗೊಂಡಿತ್ತು.

ಮೈಸೂರು- ಅಯೋಧ್ಯಾ ಧಾಮ ರೈಲಿನಲ್ಲಿ ಅನ್ಯಕೋಮಿನ ಯುವಕರು ರೈಲು ಬೋಗಿಗಳನ್ನು ಸುಟ್ಟುಹಾಕುವುದಾಗಿ ಬೆದರಿಸಿದರೆಂದು ಆರೋಪಿಸಿ ಪ್ರಯಾಣಿಕರು ಹೊಸಪೇಟೆ ರೈಲು ನಿಲ್ಧಾಣದಲ್ಲಿ ಪ್ರತಿಭಟನೆ ಮಾಡಿದರು.

ಅನ್ಯಕೋಮಿನ ಯುವಕ ರೈಲಿಗೆ ಬೆಂಕಿ ಹಚ್ಚುತ್ತೇನೆ ಎಂದಿದ್ದಲ್ಲದೇ ಪದೇ ಪದೇ ಚೈನ್ ಎಳೆದ ಕಾರಣ ರೈಲು ಸುಮಾರು ಎರಡು ಘಂಟೆಗಳ ಕಾಲ ತಡವಾಗಿ ಹೊರಡಬೇಕಾಯಿತು.

ಮೈಸೂರು-ಅಯೋಧ್ಯಾ ಧಾಮ ರೈಲಿನಲ್ಲಿ ನೂರಾರು ರಾಮ ಭಕ್ತರು ಪ್ರಯಾಣಿಸಲು ಸಜ್ಜಾಗಿದ್ದರು, ಈ ವೇಳೆ ರಾಮ ಭಕ್ತರು ಮಾರ್ಗದುದ್ದಕ್ಕೂ ಜೈ ಶ್ರೀರಾಮ್ ಎಂದು ಜಪಿಸಿದ್ದಾರೆ. ಇದರಿಂದ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದ, ಸುಮಾರು 4 ಜನ ಅನ್ಯ ಕೋಮಿನ ಯುವಕರು ರಾಮ ಭಕ್ತರ ಜೊತೆಯಲ್ಲಿ ವಾಗ್ವಾದ ಆರಂಭ ಮಾಡಿದ್ದಾರೆ.

ಈ ವೇಳೆ ಹಿಂದೂ ಹಾಗೂ ಅನ್ಯಕೋಮಿನ ಯುವಕರ ಜೊತೆ ವಾಗ್ವಾದ ಆರಂಭವಾಗಿದೆ,ಜತೆಗೆ ಪದೇ ಪದೇ ಚೈನ್ ಎಳೆದ ಕಾರಣ ಟ್ರೈನ್ ಮುಂದೆ ಸಾಗಲು ತೊಂದರೆಯಾಗಿದೆ.ಹಿಂದೂಪರ ಸಂಘಟನೆಗಳು ಬೆದರಿಕೆ ಹಾಕಿದ ಕಿಡಿಗೇಡಿಯನ್ನು ಬಂಧಿಸುವಂತೆ ಪಟ್ಟು ಹಿಡಿದರು.

ಅಯೋಧ್ಯಾ ಧಾಮ ರೈಲಿಗೆ ಬೆಂಕಿ ಹಚ್ಚುತ್ತೇನೆ ಎಂದು ಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗದಗ ನಿಲ್ದಾಣದಲ್ಲಿ ಒಬ್ಬ ಯುವಕನನ್ನು ರೈಲ್ವೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಆದರೆ ಅನ್ಯಕೋಮಿನ ನಾಲ್ವರು ಯುವಕರು ಪರಾರಿಯಾಗಿದ್ದು, ಅವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.


Share this with Friends

Related Post