Mon. Dec 23rd, 2024

5,8,9ನೇ ತರಗತಿ ಪಬ್ಲಿಕ್ ಪರೀಕ್ಷೆ ಫಲಿತಾಂಶ ಪ್ರಕಟಿಸದಂತೆ ಸುಪ್ರೀಂ ತಡೆ

Share this with Friends

ನವದೆಹಲಿ,ಏ.8: ರಾಜ್ಯದ 5,8,9ನೇ ತರಗತಿ ವಿದ್ಯಾರ್ಥಿಗಳ ಮೌಲ್ಯಾಂಕನ ಪರೀಕ್ಷೆಯ ಫಲಿತಾಂಶ (ಬೋರ್ಡ್ ಎಕ್ಸಾಂ) ಪ್ರಕಟಿಸದಂತೆ ಸುಪ್ರೀಂಕೋರ್ಟ್ ತಡೆ ನೀಡಿದೆ.

5,8 ಹಾಗೂ 9ನೇ ತರಗತಿ ವಿದ್ಯಾರ್ಥಿಗಳ ಮೌಲ್ಯಾಂಕನ ಪರೀಕ್ಷೆಗೆ ಅನುಮತಿ ನೀಡಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರುಪ್ಸಾ, ಅವರ್ ಸ್ಕೂಲ್, ಆರ್‌ಟಿಇ ವಿದ್ಯಾರ್ಥಿಗಳು ಮತ್ತು ಪೋಷಕರ ಸಂಘಟನೆ ಸುಪ್ರೀಂಕೋರ್ಟ್ ಮೊರೆ ಹೋಗಿದ್ದವು.

ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಪರೀಕ್ಷಾ ಫಲಿತಾಂಶ ಪ್ರಕಟಿಸದಂತೆ ತಡೆ ನೀಡಿದೆ ಜತೆಗೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಆದರೆ,ಈಗಾಗಲೇ 5,8 ಮತ್ತು 9ನೇ ತರಗತಿ ಪಬ್ಲಿಕ್ ಪರೀಕ್ಷೆಯ ಫಲಿತಾಂಶವನ್ನು ಶಾಲೆಗಳು ಪ್ರಕಟ ಮಾಡಿವೆ.


Share this with Friends

Related Post