Mon. Dec 23rd, 2024

ಪಾಕಿಸ್ತಾನ ಪರ ಕೂಗಿದವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿದ್ದರಾಮಯ್ಯ

Share this with Friends

ಬೆಂಗಳೂರು , ಫೆ.28: ಪಾಕಿಸ್ತಾನದ ಪರ ಘೋಷಣೆ ಕೂಗಿದ್ದು ನಿಜವೇ ಆಗಿದ್ದರೆ ಅಂಥವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಸಿಎಂ,ಎಫ್ ಎಸ್ ಎಲ್ ವರದಿ ಬಂದ ನಂತರ ಘೋಷಣೆ ಕೂಗಿದ್ದು ನಿಜವೇ ಆಗಿದ್ದರೆ ಈ ಬಗ್ಗೆ ಗಂಭೀರ ಕ್ರಮ ವಹಿಸಲಾಗುವುದು ಎಂದು ಹೇಳಿದರು.

ಪಾಕಿಸ್ತಾನದ ಪರವಾಗಿ ಘೋಷಣೆ ನಿಜವೇ ಆಗಿದ್ದರೆ ಅಂಥವರನ್ನು ರಕ್ಷಿಸುವುದಿಲ್ಲ,
ರಾಷ್ಟ್ರದ ವಿರುದ್ಧ ಘೋಷಣೆ ಕೂಗಿರುವುದು ಸಾಭೀತಾದರೆ ಯಾರೇ ಆಗಲಿ ಕಠಿಣ ಕ್ರಮ ವಹಿಸಲಾಗುವುದು ಎಂದರು.

ವಿಧಾನಸೌಧದಲ್ಲಿಯೇ ಈ ಘಟನೆ ಆಗಿದೆಯಲ್ಲಾ ಎಂಬ ಪ್ರಶ್ನೆಗೆ ಕೂಗುವವರಿಗೆ ಇಲ್ಲಾದರೇನು, ನಿಜ ಆಗಿದ್ದರೆ ಕಠಿಣ ಕ್ರಮ ಖಚಿತ ಎಂದು ಕಡಕ್ಕಾಗಿ ಹೇಳಿದರು.


Share this with Friends

Related Post