Wed. Dec 25th, 2024

ಮನೆ ಬೀಗ ಮುರಿದು ಚಿನ್ನಾಭರಣ ದೋಚಿದ ಕಳ್ಳರು

Share this with Friends

ಮೈಸೂರು,ಜೂ24: ಮನೆ ಬಾಗಿಲು ಬೀಗ ಮುರಿದು ನಗದು ಮತ್ತು ಚಿನ್ನಾಭರಣ ದೋಚಿದ ಘಟನೆ ಟಿ.ನರಸೀಪುರ ಪಟ್ಟಣದ ತ್ರಿವೇಣಿನಗರದಲ್ಲಿ ನಡೆದಿದೆ.

ಅನೂಷ ಎಂಬುವರ ಮನೆಯಲ್ಲಿ ಕೃತ್ಯ ನಡೆದಿದ್ದು,70 ಗ್ರಾಂ ಚಿನ್ನಾಭರಣ ಹಾಗೂ 40 ಸಾವಿರ ನಗದು ದೋಚಿ ಕಳ್ಳರು ಪರಾರಿಯಾಗಿದ್ದಾರೆ.

ಅನೂಷ ಅವರ ಪತಿ ಮೋಟಾರ್ ರಿವೈಂಡಿಂಗ್ ಕೆಲಸ ಮಾಡುತ್ತಿದ್ದು,ಮನೆಗೆ ಬೀಗ ಹಾಕಿ ಹೊರಗೆ ತೆರಳಿದ್ದ ವೇಳೆ ಖದೀಮರು ಹಣ,ಆಭರಣ ದೋಚಿದ್ದಾರೆ.

ಸ್ಥಳಕ್ಕೆ ಬೆರಳಚ್ಚು ತಜ್ಞರು, ಶ್ವಾನದಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು, ಟಿ.ನರಸೀಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.


Share this with Friends

Related Post