Tue. Dec 24th, 2024

ಪ್ರಾಣಿ ಪಕ್ಷಿ ಸಂಕುಲ ಉಳಿಸಲು ಎಚ್. ವಿ ರಾಜೀವ್ ಕರೆ

Share this with Friends

ಮೈಸೂರು, ಫೆ.26: ಮನುಷ್ಯನ ಒಡನಾಡಿಯಾಗಿರುವ ಪ್ರಾಣಿ ಪಕ್ಷಿಗಳ ಜೀವ ಸಂಕುಲವನ್ನುಳಿಸಲು ನಾಗರಿಕರು ಮುಂದಾಗಬೇಕೆಂದು ಮೂಡ ಮಾಜಿ ಅಧ್ಯಕ್ಷ ಎಚ್ ವಿ ರಾಜೀವ್ ಕರೆ ನೀಡಿದರು.

ಕೆಎಂಪಿಕೆ ಚಾರಿಟಬಲ್ ಟ್ರಸ್ಟ್
2ತಿಂಗಳ ಕಾಲ ಮೂಕ ಸ್ಪಂದನೆ ಎಂಬ ನೀರುಣಿಸಿ-ಜೀವವನ್ನುಳಿಸಿ, ಅಭಿಯಾನವನ್ನು ಮೈಸೂರು ನಗರದಲ್ಲಿ ಹಮ್ಮಿಕೊಂಡಿದೆ.

ಚಾಮುಂಡಿಪುರಂ ವೃತ್ತದಲ್ಲಿರುವ ತಗಡೂರು ರಾಮಚಂದ್ರರಾವ್ ಉದ್ಯಾನವನದಲ್ಲಿ ಮರಗಳಿಗೆ ಪ್ರಾಣಿ ಪಕ್ಷಿ ಉಳಿಸಿ ಎಂಬ ನಾಮಫಲಕ, ನೀರು ಹಾಗೂ ಆಹಾರದ ಬಟ್ಟಲು ಅಳವಡಿಸುವ ಮೂಲಕ ಮೂಕ ಸ್ಪಂದನೆ‌ ಅಭಿಯಾನಕ್ಕೆ ಚಾಲನೆ ನೀಡಿ‌ ರಾಜೀವ್‌ ಮಾತನಾಡಿದರು.

ಬೇಸಿಗೆಯ ರಣಬಿಸಿಲಿನ ತಾಪಮಾನದ ತೀವ್ರತೆಯಿಂದಾಗಿ ಪ್ರಾಣಿ ಪಕ್ಷಿಸಂಕುಲ ಬಳಲುತ್ತಿವೆ. ಕುಡಿಯುವ ನೀರು ಆಹಾರಕ್ಕಾಗಿ ಪರಿತಪಿಸುತ್ತವೆ. ಆದ್ದರಿಂದ ಪರಿಸರ ರಕ್ಷತಿ ರಕ್ಷಿತಃ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ 2ತಿಂಗಳ ಕಾಲ ಮೂಕ ಸ್ಪಂದನೆ ಎಂಬ ನೀರುಣಿಸಿ-ಜೀವವನ್ನುಳಿಸಿ, ಅಭಿಯೋಜನೆಯನ್ನು ಮೈಸೂರು ನಗರದ ಸುತ್ತಮುತ್ತ ಪ್ರದೇಶಗಳಲ್ಲಿ ರೂಪಿಸುತ್ತಿರುವುದು ಅತ್ಯುತ್ತಮ ಕೆಲಸ ಎಂದು ಹೇಳಿದರು.

ಬೇಸಿಗೆ ಆರಂಭಗೊಂಡಿದ್ದು ಪ್ರಾಣಿ ಪಕ್ಷಿಗಳು ತಮ್ಮ ಅಸ್ಥಿತ್ವಕ್ಕಾಗಿ ಹೋರಾಟ
ನಡೆಸುವ ಹಾದಿಯಲ್ಲಿವೆ. ಜನವಸತಿ ಮತ್ತು ಜನಸಂಖ್ಯೆಗನುಗುಣವಾಗಿ ಮೊಬೈಲ್ ಮತ್ತು ಇತರೆ ತರಂಗದಿಂದಾಗಿ ಹಲವಾರು ಪಕ್ಷಿಗಳು ನಶಿಸಿ ಹೋಗುತ್ತಿವೆ.

ಜನತೆಯ ಮಧ್ಯೆಯೇ ಬದುಕಿ ಬೆರೆತು ಜೀವಿಸುವ ಪ್ರಾಣಿಪಕ್ಷಿ ಸಂಕುಲಕ್ಕಿಂದು ತಿನ್ನಲು ಆಹಾರ ಮತ್ತು ಕುಡಿಯಲು ನೀರು ಅಗತ್ಯವಾಗಿದೆ.

ಸಮಾಜಮುಖಿ ಟ್ರಸ್ಟ್ ನ ಈ ಸೇವಾ ಕಾರ್ಯ ನಿಜಕ್ಕೂ ಶ್ಲಾಘನೀಯ ಇವರ ಈ ಕೆಲಸ ಯಶಸ್ವಿಗೊಳ್ಳಲಿ ಸಾರ್ವಜನಿಕರು ಸೇವಾ ಕಾರ್ಯಕ್ಕೆ ಕೈ ಜೋಡಿಸಲಿ ಎಂದು ಹೇಳಿದರು

ನಂತರ ಮಾತನಾಡಿದ ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ್ ಅಯ್ಯಂಗಾರ್ ನಮ್ಮ ಈ ಅಭಿಯಾನಕ್ಕೆ ಸಾರ್ವಜನಿಕರು ಸಹ ಕೈ ಜೋಡಿಸಬೇಕೆಂದು ಕೋರಿದರು.

ಮೈಸೂರು ನಗರದ ಪ್ರತಿಯೊಂದು ವಾರ್ಡ್‌ ನಲ್ಲಿ ಸಾರ್ವಜನಿಕ ಸ್ಥಳದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ನೀರಿನ ತೊಟ್ಟಿ, ಮರಗಳಿಗೆ ನೀರಿನ ತಟ್ಟೆ ಹಾಗೂ ಆಹಾರದ ತಟ್ಟೆ ನೆಡಲಾಗುವುದು ಹಾಗೆಯೇ ಸುತ್ತಮುತ್ತ ಇರುವವರಿಗೆ ಪ್ರತಿನಿತ್ಯ ಪ್ರಾಣಿ ಪಕ್ಷಿಗಳಿಗೆ ಆಹಾರ ನೀಡುವಂತೆ ಜಾಗೃತಿ ಮೂಡಿಸಲಾಗುವುದು

ನಮ್ಮ ಅಭಿಯಾನಕ್ಕೆ ಕೈ ಜೋಡಿಸುವವರು ಹಾಗೂ ಆಸಕ್ತರು 9880752727 ಸಂಪರ್ಕಿಸಬಹುದು ಎಂದು ತಿಳಿಸಿದರು.

ಹಿರಿಯ ಸಮಾಜಸೇವಕರಾದ ಕೆ ರಘುರಾಮ ವಾಜಪೇಯಿ ಮಾತನಾಡಿ,ಎಲ್ಲರೂ ಅವರವರ ಮನೆಗಳ ತಾರಸಿಯ ಮೇಲೆ, ಮರಗಳ ಕೆಳಗೆ, ಮನೆಯ ಮುಂದಿನ ರಸ್ತೆಯ ಇಕ್ಕೆಲಗಳಲ್ಲಿ ಪ್ರಾಣಿ
ಪಕ್ಷಿಗಳ ಬಾಯಿಗೆ ಎಟುಕುವಂತೆ ಮಣ್ಣಿನ ಬಟ್ಟಲು ಅಥವಾ ಸಣ್ಣ ಸಿಮೆಂಟ್ ತೊಟ್ಟಿಗಳನ್ನಿಟ್ಟು ಅದರಲ್ಲಿ ಶುದ್ಧ ನೀರನ್ನು ತುಂಬಿಡಬೇಕು ಮತ್ತು ಆಹಾರ ಧಾನ್ಯ ಮಿತವಾಗಿಟ್ಟು ಅವುಗಳನ್ನು ಸಲುಹಬೇಕೆಂದು ಸಲಹೆ ನೀಡಿದರು.

ನಿಕಟ ಪೂರ್ವ ನಗರಪಾಲಿಕ ಸದಸ್ಯರಾದ ಮ. ವಿ ರಾಮ್ ಪ್ರಸಾದ್, ಅಪೂರ್ವ ಸುರೇಶ್, ಕೆ ಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ, ಮೃಗಾಲಯ ಪ್ರಾಧಿಕಾರದ ಮಾಜಿ ನಿರ್ದೇಶಕರಾದ ಜ್ಯೋತಿ ರೇಚಣ್ಣ, ಕಡಕೋಳ ಜಗದೀಶ್,
ಅಖಿಲ ಭಾರತೀಯ ಗ್ರಾಹಕ ಪಂಚಾಯಿತಿ ಮೈಸೂರು ಘಟಕದ ಅಧ್ಯಕ್ಷರಾದ ಚಂದ್ರಶೇಖರ್, ರಾಕೇಶ್, ಮಿರ್ಲೆ ಪನಿಶ್, ಸುಚೇಂದ್ರ, ವಿದ್ಯಾ, ನಾಗಶ್ರೀ, ದಯಾನಂದ, ಮೈಲಾ ವಿಜಯ್ ಕುಮಾರ್ ಮತ್ತಿತರರು ಭಾಗವಹಿಸಿದ್ದರು.


Share this with Friends

Related Post