Tue. Dec 24th, 2024

ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ನಾಳೆ ಪರಶುರಾಮ ಜಯಂತಿ

Share this with Friends

ಮೈಸೂರು,ಮೇ.9: ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಪಿತೃವಾಕ್ಯ ಪರಿಪಾಲಕ ಪರಶುರಾಮ
ಜಯಂತಿಯನ್ನು ನಾಳೆ ಹಮ್ಮಿಕೊಳ್ಳಲಾಗಿದೆ.

ಚಾಮರಾಜಪುರಂ ವಿಷ್ಣುವರ್ಧನ ರಸ್ತೆ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಕಚೇರಿಯಲ್ಲಿ ನಾಳೆ ಬೆಳಗ್ಗೆ 11 ಕ್ಕೆ ಪರುಶರಾಮ ಜಯಂತಿಯನ್ನು ಆಯೋಜಿಸಲಾಗಿದೆ ಎಂದು ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್ ತಿಳಿಸಿದ್ದಾರೆ.

ಪೂಜ್ಯ ಇಳೈ ಆಳ್ವಾರ್ ಸ್ವಾಮೀಜಿ,
ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ ಟಿ ಪ್ರಕಾಶ್, ಹಿರಿಯ ಸಮಾಜ ಸೇವಕರಾದ ಕೆ ರಘುರಾಮ್ ವಾಜಪೇಯಿ, ಅರ್ಚಕರ ಸಂಘದ ಅಧ್ಯಕ್ಷರಾದ ವಿದ್ವಾನ್ ಕೃಷ್ಣಮೂರ್ತಿ,ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಅಧ್ಯಕ್ಷರಾದ ಎಚ್ ಎನ್ ಶ್ರೀಧರ್ಮೂರ್ತಿ ಹಾಗೂ ವಿಪ್ರ ಮುಖಂಡರು ಆಗಮಿಸಲಿದ್ದಾರೆ.


Share this with Friends

Related Post