Mon. Dec 23rd, 2024

ನಾಳೆ‌ ಮೂಕ ಸ್ಪಂದನ ಕಾರ್ಯಕ್ರಮ

Share this with Friends

ಮೈಸೂರು,ಮೇ.3: ಮೈಸೂರಿನ ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ನಾಳೆ ಪ್ರಾಣಿ ಪಕ್ಷಿಗಳಿಗೆ ನೀರಿನ ತೊಟ್ಟಿ ಅಳವಡಿಸುವ ಮೂಕ ಸ್ಪಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಬೇಸಿಗೆ ತಾಪದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು,
ಚಾಮುಂಡಿ ಬೆಟ್ಟದ ತಪಲಿನಲ್ಲಿ ಮೇ 4ರಂದು ಬೆಳಗ್ಗೆ 9.30ಕ್ಕೆ ಮೂಕ ಸ್ಪಂದನಕ್ಕೆ ಚಾಲನೆ ನೀಡಲಾಗುವುದು ಎಂದು ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ತಿಳಿಸಿದ್ದಾರೆ.

ಹೋಟೆಲ್ ಮಲಿಕರ ಸಂಘದ ಅಧ್ಯಕ್ಷ ನಾರಾಯಣ ಗೌಡ,ಸೈನಿಕ ಅಕಾಡೆಮಿ ಮೈಸೂರಿನ ಸಂಸ್ಥಾಪಕ ಶ್ರೀಧರ್ ಸಿ ಎಂ, ಪೊಲೀಸ್ ಸಬ್ ಇನ್ಸ್ ಪೆಕ್ಟರ್ ವಿ ಮಹೇಶ್, ಪ್ರಜ್ಞಾವಂತ ನಾಗರಿಕ ವೇದಿಕೆ ಅಧ್ಯಕ್ಷ ಕಡಕೋಳ ಜಗದೀಶ್,ಸಮಾಜ ಸೇವಕರಾದ ಸವಿತಾ ಘಾಟ್ಕೆ ಮತ್ತಿತರರು ಭಾಗವಹಿಸಲಿದ್ದಾರೆ.


Share this with Friends

Related Post