Tue. Dec 24th, 2024

ಮಳೆಯಲ್ಲೂ ಪಾರಂಪರಿಕ ಟಾಂಗಾ ಸವಾರಿ

Share this with Friends

ಮೈಸೂರು: ಮುಂಜಾನೆಯ ತುಂತುರು ಮಳೆಯಲ್ಲೂ ಸಾಂಪ್ರದಾಯಿಕ ಉಡುಗೆಗಳನ್ನು ತೊಟ್ಟು‌ ಜೋಡಿಗಳು ಜನರ ಮನ ಸೆಳೆದರು.

ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಪುರಭವನದ ಆವರಣದಲ್ಲಿ ಹಮ್ಮಿಕೊಂಡಿದ್ದ ಪಾರಂಪರಿಕ ಉಡುಗೆಯಲ್ಲಿ ದಂಪತಿಗಳಿಗೆ ಟಾಂಗಾ ಸವಾರಿ ಹಲವು ಜಿಲ್ಲೆಗಳಿಂದ ಬಂದಿದ್ದ ಜೋಡಿಗಳು ಮಿಂಚಿದರು.

ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಆಯುಕ್ತ ದೇವರಾಜು ಎ ಅವರು ಈ ವೇಳೆ ಮಾತನಾಡಿ, ಸಾಮೂಹಿಕ ವಿವಾಹ ಏರ್ಪಾಡು ಮಾಡಿರುವ ರೀತಿಯಲ್ಲಿ ವೇದಿಕೆಯು ಕಂಗೊಳಿಸುತ್ತಿದೆ,ನೂತನ ದಂಪತಿಗಳಂತೆ ಎಲ್ಲಾ ಜೋಡಿಗಳು ಆಕರ್ಷಿಸುತ್ತಿದ್ದು, ತುಂತುರು ಮಳೆಯ ನಡುವೆಯೂ ಸಂಭ್ರಮದ ವಾತಾವರಣ ಸೃಷ್ಟಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಮೈಸೂರಿನ ಮಹಾರಾಜರು ಪ್ರಾರಂಭಿಸಿದ ಟಾಂಗಾ ಸವಾರಿ ಇಂದಿಗೂ ಆಕರ್ಶಣೆ ಉಳಿಸಿಕೊಂಡಿದೆ, ಮೈಸೂರು ಎಂದರೆ ಟಾಂಗಾ, ಟಾಂಗಾ ಎಂದರೆ ಮೈಸೂರು ಎಂಬ ಪ್ರತೀತಿ ಇದೆ, ಸಾಂಪ್ರದಾಯಿಕ ಉಡುಗೆ ಮತ್ತು ಟಾಂಗಾ ಸವಾರಿ ಇವೆರಡನ್ನು ಒಂದುಗೂಡಿಸಿ ಪಾರಂಪರಿಕ ದಸರಾವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ ಎಂದು ಹೇಳಿದರು.

ಟಾಂಗಾ ಸವಾರಿಯಲ್ಲಿ ಮೈಸೂರು, ಶಿವಮೊಗ್ಗ, ಹಾಸನ, ಬೆಂಗಳೂರು ಹಾಗೂ ಇನ್ನಿತರೆ ಜಿಲ್ಲೆಗಳಿಂದ ನೋಂದಾಯಿತ ದಂಪತಿಗಳು ಸಾಂಪ್ರದಾಯಿಕ ಉಡುಗೆಯ ಮೂಲಕ ಕಣ್ಮನ ಸೆಳೆದರು.

ಕೊಡಗು, ಮೈಸೂರಿನ ಪಾರಂಪಾರಿಕ ಉಡುಗೆ ತೊಟ್ಟ ದಂಪತಿಗಳು, ಮೈಸೂರು ಪೇಠ, ರೇಷ್ಮೆ ಸೀರೆ ತೊಟ್ಟ ದಂಪತಿಗಳು ಹಾಗೂ ಕಿರಿಯ, ಹಿರಿಯ ವಯಸ್ಸಿನ ಜೋಡಿಗಳು 25 ಟಾಂಗಾ ಗಾಡಿಗಳಲ್ಲಿ ನಗರದ ಐತಿಹಾಸಿಕ ರಸ್ತೆಗಳಲ್ಲಿ ಟಾಂಗಾದಲ್ಲಿ ಸಾಗಿದರು.

ಸಂಪನ್ಮೂಲ ವ್ಯಕ್ತಿಯಾದ ಡಾ.ಎನ್ .ಎಸ್ ರಂಗಾರಾಜು ಮತ್ತು ಇತಿಹಾಸ ಪ್ರಾಧ್ಯಾಪಕರಾದ ಡಾ.ಲ.ನ ಸ್ವಾಮಿ ಅವರು ಹಾಜರಿದ್ದರು.


Share this with Friends

Related Post