Mon. Dec 23rd, 2024

ಮಾದರಿ ನೀತಿ ಸಂಹಿತೆ ಅನುಷ್ಠಾನ ಕುರಿತು ಸಿಬ್ಬಂದಿಗಳಿಗೆ ತರಬೇತಿ

Share this with Friends

ಮೈಸೂರು,ಮಾ.26: ಹುಣಸೂರಿನ ಅಂಬೇಡ್ಕರ್ ಭವನದಲ್ಲಿ ಲೋಕಸಭಾ ಚುನಾವಣೆ ಸಂಬಂಧ ಮಾದರಿ ನೀತಿ ಸಂಹಿತೆ ಅನುಷ್ಠಾನ ಕುರಿತು ತರಬೇತಿ ಹಮ್ಮಿಕೊಳ್ಳಲಾಯಿತು.

ಆಯಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತಹಶೀಲ್ದಾರ್‌ಗಳು, ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಎಫ್‌ ಎಸ್ ಟಿ, ಎಸ್‌ಎಸ್‌ಟಿ, ವಿವಿಟಿ ತಂಡದ ಮುಖ್ಯಸ್ಥರಿಗೆ, ಅಧಿಕಾರಿಗಳಿಗೆ, ಸಿಬ್ಬಂದಿಗೆ ತರಬೇತಿ ನಡೆಯಿತು.

ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ.ಗಾಯಿತ್ರಿ ಅವರು ಮಾತನಾ‌ಡಿ, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣಾ ಕರ್ತವ್ಯಗಳಿಗೆ ನಿಯೋಜಿಸಿರುವ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಹೇಳಿದರು.

ಸಭೆ, ಸಮಾರಂಭಗಳಿಗೆ ಕಡ್ಡಾಯ ಅನುಮತಿ ಹಾಗೂ ವೆಚ್ಚ ನಿರ್ವಹಣೆಗಳ ಬಗ್ಗೆ ನಿಗಾ ವಹಿಸಿ, ಮುಂದಿನ ದಿನಗಳಲ್ಲಿ ಅಧಿಕಾರಿಗಳು ಸಾಕಷ್ಟು ಜಾಗರೂಕರಾಗಿ ವಾಹನಗಳ ತಪಾಸಣೆ ಕಟ್ಟುನಿಟ್ಟಾಗಿ ಮಾಡಿ ಎಂದು ಸೂಚಿಸಿದರು.

ತರಬೇತಿ ಕಾರ್ಯಕ್ರಮದಲ್ಲಿ ಮಾದರಿ ನೀತಿ ಸಂಹಿತೆ ಪಾಲನೆ ಮತ್ತು ಅನುಷ್ಠಾನ ಮಾಸ್ಟರ್ ಟ್ರೈನರ್ ಕೃಪಾ ಗಣೇಶ್ , ಮಾದರಿ ನೀತಿ ಸಂಹಿತೆ ನೋಡೆಲ್ ಅಧಿಕಾರಿಗಳಾದ ರುದ್ರೇಶ್, ನಂದೀಶ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.


Share this with Friends

Related Post