Mon. Dec 23rd, 2024

ತುಕಾಲಿ ಸಂತೋಷ್ ಅಪಘಾತದಲ್ಲಿ ಗಾಯಗೊಂಡಿದ್ದ ಆಟೋ ಚಾಲಕ ಚಿಕಿತ್ಸೆ ಫಲಿಸದೆ ಸಾವು

Tukali Santhosh Car Accident
Share this with Friends

ಬೆಂಗಳೂರು : ತುಕಾಲಿ ಸಂತೋಷ್ ಕಾರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಆಟೋ ಚಾಲಕ ಜಗದೀಶ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ತುಕಾಲಿ ಸಂತೋಷ್ ಅವರು ಹೊಳೆನರಸೀಪುರದವರು. ತುಕಾಲಿ ಸಂತೋಷ್​ ಅವರು ತಮ್ಮ ಕಾರಿನಲ್ಲಿ ತುಮಕೂರು ಕಡೆಯಿಂದ ಕುಣಿಗಲ್ ಮಾರ್ಗವಾಗಿ ಹೊಳೆನರಸೀಪುರ ಕಡೆ ಹೋಗುತ್ತಿದ್ದರು. ಅದೇ ವೇಳೆ ಕುಣಿಗಲ್​ನಿಂದ ಕುರುಡಿಹಳ್ಳಿಗೆ ಆಟೋ ತೆರಳುತ್ತಿತ್ತು. ತುಕಾಲಿ ಸಂತೋಷ್​ ಕಾರಿನ ಬಲ ಭಾಗಕ್ಕೆ ಆಟೋ ಡಿಕ್ಕಿ ಹೊಡೆದಿದೆ. ಆಟೋ ಬಹುತೇಕ ನಜ್ಜುಗುಜ್ಜಾಗಿತ್ತು. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ಈ ಅಪಘಾತ ನಡೆದಿತ್ತು.

ಗಾಯಗೊಂಡಿದ್ದ ಆಟೋ ಚಾಲಕ ಜಗದೀಶ್ ಅವರನ್ನು ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಅವರು ಇಂದು (ಮಾರ್ಚ್ 14) ಮುಂಜಾನೆ ಮೃತಪಟ್ಟಿದ್ದಾರೆ. ಜಗದೀಶ್ ಅವರಿಗೆ 40 ವರ್ಷ ವಯಸ್ಸಾಗಿತ್ತು.


Share this with Friends

Related Post