Wed. Dec 25th, 2024

ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಟ್ವಿಸ್ಟ್; ಪ್ರೀತಂ ಗೌಡ ಆಪ್ತ ಸೇರಿ ಇಬ್ಬರು ವಶ

Share this with Friends

ಹಾಸನ,ಮೇ.12: ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡರ ಆಪ್ತ ಸೇರಿದಂತೆ ಇಬ್ಬರನ್ನು ಎಸ್‌ಐಟಿ ವಶಕ್ಕೆ ಪಡೆದಿದೆ.

ಪೆನ್‌ಡ್ರೈವ್ ವೈರಲ್ ವಿಚಾರದಲ್ಲಿ ಮಾಜಿ ಶಾಸಕ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಅತ್ಯಾಪ್ತ ಲಿಖಿತ್‌ಗೌಡ ಹಾಗೂ ಯಲಗುಂದ ಚೇತನ್ ಅವರನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಇಬ್ಬರನ್ನೂ ನಿನ್ನೆ ಮಧ್ಯರಾತ್ರಿಯೇ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಪ್ರೀತಂಗೌಡ ಜೊತೆ ಚೇತನ್ ಹಾಗೂ ಲಿಖಿತ್ ಗುರುತಿಸಿಕೊಂಡಿದ್ದರು,ಅದರಲ್ಲಿ ಪ್ರೀತಂ ಗೌಡ ಕಚೇರಿಯ ಸಿಬ್ಬಂದಿ ಹಾಗೂ ಅವರ ಆಪ್ತ ನಿಖಿತ್.

ಹಾಸನದ ನಗರ ಪೊಲೀಸ್ ಠಾಣೆ ಸಮಚ್ಚಯದಲ್ಲಿರುವ ಸೈಬರ್ ಕ್ರೈಂ ಠಾಣೆಯಲ್ಲಿ ಇಬ್ಬರನ್ನೂ ವಿಚಾರಣೆ ನಡೆಸಲಾಗುತ್ತಿದೆ,ಇವರಿಬ್ಬರ ಬಂದನ ಇದೀಗ ತೀವ್ರ ಕುತೂಹಲ ಕೆರಳಿಸಿದೆ.


Share this with Friends

Related Post