Sun. Dec 22nd, 2024

ಲಡ್ಡುವಿಗೆ ಪ್ರಾಣಿ ಕೊಬ್ಬು ಬಳಕೆಮಹಾ ಅಪಚಾರ-ವಿಶ್ವ ಪ್ರಸನ್ನ ಶ್ರೀ

Share this with Friends

ಬೆಂಗಳೂರು: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಹಾಗೂ ಪ್ರಾಣಿಯ ಕೊಬ್ಬು ಬಳಸಿರುವುದು ಮಹಾ ಅಪಚಾರ ಎಂದು ಉಡುಪಿ ಪೇಜಾವರ ಮಠದ ವಿಶ್ವ ಪ್ರಸನ್ನ ಸ್ವಾಮೀಜಿ ಆಕ್ರೋಶ ಪಟ್ಟಿದ್ದಾರೆ.

ಅಯೋಧ್ಯೆಯಲ್ಲಿ ತಿರುಪತಿ ಲಡ್ಡು ವಿವಾದದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಸಾದದಲ್ಲಿ ಮೀನಿನ ಎಣ್ಣೆ, ಹಂದಿಯ ಕೊಬ್ಬು, ಹಸುವಿನ ಕೊಬ್ಬು ಬಳಸಿದ್ದಾರೆ, ಇದು ಹಿಂದೂ ಸಮಾಜಕ್ಕೆ ಬಗೆದಿರುವ ದೊಡ್ಡ ಅಪಚಾರ ಜತೆಗೆ ಇದು ದೇವರಿಗೂ ಬಗೆದಿರುವ ಅಪಚಾರ ಎಂದು ಕಿಡಿಕಾರಿದರು.

ತಿರುಪತಿಯ ಶ್ರೀನಿವಾಸ ದೇವರು, ಗೋವಿನ ರಕ್ಷಣೆಗೆ ಅವತರಿಸಿದವ,ಅಂತಹ ದೇವರಿಗೆ ಹಸುವಿನ ಕೊಬ್ಬಿನ ಪ್ರಸಾದ ನೀಡಿದ್ದಾರೆ ಇದು ಬಹುದೊಡ್ಡ ಅಪರಾಧ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಿಂದೂಗಳ ಧಾರ್ಮಿಕ ಶ್ರದ್ಧೆಯ ಮೇಲಿನ ಹಲ್ಲೆ ಇದಾಗಿದೆ, ಉಪಯೋಗಕ್ಕೆ ಅನರ್ಹವಾದ ತುಪ್ಪವನ್ನು ದೇವರ ಪ್ರಸಾದಕ್ಕೆ ಬಳಸಿದ್ದಾರೆ ಇಂತಹ ತುಪ್ಪ ತಯಾರಿಸುವ ಅಡ್ಡಗಳನ್ನು ಕಂಡುಹಿಡಿದು ತನಿಖೆ ನಡೆಸುವುದು ಸರ್ಕಾರದ ಕರ್ತವ್ಯ ಎಂದು ಹೇಳಿದರು.

ಧಾರ್ಮಿಕ ಶ್ರದ್ಧಾ ಕೇಂದ್ರಗಳು, ಸರ್ಕಾರದ ಹಿಡಿತದಲ್ಲಿ ಇರಬಾರದು,ಇವು ಹಿಂದೂ ಸಮಾಜದ ಕೈಯಲ್ಲಿರಬೇಕು, ಹಿಂದೂಗಳ ಸಂಸ್ಥೆಗೆ ತಿರುಪತಿ ದೇವಾಲಯದ ಆಡಳಿತ ನೀಡಿ ಎಂದು ವಿಶ್ವಪ್ರಸನ್ನ ಶ್ರೀ ಒತ್ತಾಯಿಸಿದರು.


Share this with Friends

Related Post