Mon. Dec 23rd, 2024

ಲಾಲ್ ಕೃಷ್ಣ ಅಡ್ವಾಣಿಗೆ ಭಾರತ ರತ್ನ ಘೋಷಣೆ

LK Advani
Share this with Friends

ನವದೆಹಲಿ, ಫೆ.3: ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ದೇಶದ ಪರಮೋಚ್ಚ ಗೌರವವಾದ ಭಾರತ ರತ್ನ ನೀಡಿ ಗೌರವಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಘೋಷಣೆ ಮಾಡಿದ್ದಾರೆ.ಅಟಲ್ ಬಿಹಾರಿ ವಾಜಪೇಯಿ ಅವರ ನೇತೃತ್ವದ ಎನ್​ಡಿಎ ಸರ್ಕಾರದಲ್ಲಿ ಉಪ ಪ್ರಧಾನಿಯಾಗಿ ಎಲ್​ಕೆ ಅಡ್ವಾಣಿ ಕಾರ್ಯನಿರ್ವಹಿಸಿದ್ದಾರೆ.

90 ರ ದಶಕದಲ್ಲಿ ದೇಶದಾದ್ಯಂತ ಹಮ್ಮಿಕೊಂಡಿದ್ದ ರಥಯಾತ್ರೆ ಮೂಲಕ ರಾಷ್ಟ್ರದಾದ್ಯಂತ ಸಂಚಲನ ಮೂಡಿಸಿದ್ದ ಎಲ್​ಕೆ ಅಡ್ವಾಣಿ, ಬಿಜೆಪಿಯ ಭೀಷ್ಮ ಎಂದೇ ಖ್ಯಾತರಾಗಿದ್ದಾರೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸಹ ಭಾರತ ರತ್ನ ಗೌರವಕ್ಕೆ ಪಾತ್ರರಾಗಿದ್ದರು. ಇದೀಗ ಅವರ ಸಮಕಾಲೀನ ರಾಜಕೀಯ ಧುರೀಣ ಅಡ್ವಾಣಿ ಅವರೂ ಭಾರತ ರತ್ನ ಪುರಸ್ಕಾರಕ್ಕೆ ಭಾಜನರಾದಂತಾಗಿದೆ.

ಎಲ್​​ಕೆ ಅಡ್ವಾಣಿ ಜೀ ಅವರಿಗೆ ಭಾರತ ರತ್ನ ನೀಡುವ ಬಗ್ಗೆ ಮಾಹಿತಿ ಹಂಚಿಕೊಳ್ಳಲು ನನಗೆ ತುಂಬಾ ಸಂತೋಷವಾಗಿದೆ. ನಾನು ಕೂಡ ಅವರೊಂದಿಗೆ ಮಾತನಾಡಿ ಈ ಗೌರವಕ್ಕೆ ಪಾತ್ರರಾಗಿದ್ದಕ್ಕೆ ಅಭಿನಂದಿಸಿದ್ದೇನೆ. ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜಕಾರಣಿಗಳಲ್ಲಿ ಅವರು ಒಬ್ಬರು. ಭಾರತದ ಅಭಿವೃದ್ಧಿಗೆ ಅವರ ಕೊಡುಗೆ ಸ್ಮರಣಾರ್ಹ. ತಳಮಟ್ಟದಲ್ಲಿ ಕೆಲಸ ಮಾಡುವುದರಿಂದ ಹಿಡಿದು ನಮ್ಮ ಉಪಪ್ರಧಾನಿಯಾಗಿ ದೇಶಸೇವೆ ಮಾಡುವವರೆಗಿನ ಜೀವನ ಅವರದು ಎಂದು ಪ್ರಧಾನಿ ಮೋದಿ ಬಣ್ಣಿಸಿದ್ದಾರೆ.

ಶಿವಣ್ಣನನಿಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ ಸಪ್ತ ಸಾಗರದಾಚೆ ಎಲ್ಲೋ ನಿರ್ದೇಶಕ

ಸಾರ್ವಜನಿಕ ಜೀವನದಲ್ಲಿ ಅಡ್ವಾಣಿ ಜೀಯವರ ದಶಕಗಳ ಸುದೀರ್ಘ ಸೇವೆಯು ಅಚಲವಾದ ಬದ್ಧತೆಯಿಂದ ಗುರುತಿಸಲ್ಪಟ್ಟಿದೆ. ಇಷ್ಟೇ ಅಲ್ಲದೆ, ಪಾರದರ್ಶಕತೆ ಮತ್ತು ಸಮಗ್ರತೆಗೆ ಹೆಸರಾಗಿದೆ. ಅದು ರಾಜಕೀಯ ನೀತಿಶಾಸ್ತ್ರದಲ್ಲಿ ಅನುಕರಣೀಯ ಮಾನದಂಡವನ್ನು ಹೊಂದಿಸಿದೆ. ಅವರು ರಾಷ್ಟ್ರೀಯ ಏಕತೆ ಮತ್ತು ಸಾಂಸ್ಕೃತಿಕ ಪುನರುತ್ಥಾನದ ವಿಚಾರದಲ್ಲಿ ದೇಶಕ್ಕೆ ಕೊಡುಗೆ ಸಲ್ಲಿಸಲು ಅಪ್ರತಿಮ ಪ್ರಯತ್ನ ಮಾಡಿದ್ದಾರೆ. ಅವರಿಗೆ ಭಾರತರತ್ನ ಪ್ರಶಸ್ತಿ ಪ್ರದಾನ ಮಾಡುವುದು ನನ್ನ ಪಾಲಿಗೆ ಅತ್ಯಂತ ಭಾವನಾತ್ಮಕ ಕ್ಷಣ. ಅವರೊಂದಿಗೆ ಸಂವಹನ ನಡೆಸಲು ಮತ್ತು ಅವರಿಂದ ಕಲಿಯಲು ನನಗೆ ಅಸಂಖ್ಯಾತ ಅವಕಾಶಗಳು ಸಿಕ್ಕಿರುವುದು ನನ್ನ ಪುಣ್ಯ ವಿಶೇಷ ಎಂದು ನಾನು ಯಾವಾಗಲೂ ಪರಿಗಣಿಸುತ್ತೇನೆ ಎಂದು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಮೋದಿ ಉಲ್ಲೇಖಿಸಿದ್ದಾರೆ.


Share this with Friends

Related Post