Mon. Dec 23rd, 2024

ಡಾ.ಸಿ.ಕೆ.ವನಮಾಲಾಗೆ ವಿಪ್ರ ಮಹಿಳಾ ರತ್ನ ಪ್ರಶಸ್ತಿ

Share this with Friends

ಮೈಸೂರು,ಏ.1: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಶಿಕ್ಷಣ ಕ್ಷೇತ್ರದಿಂದ
ಡಾ.ಸಿ.ಕೆ.ವನಮಾಲ ಅವರಿಗೆ ವಿಪ್ರ ಮಹಿಳಾ ರತ್ನ ಪ್ರಶಸ್ತಿ ನೀಡಲಾಯಿತು.

ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಹಾಗೂ ವಿಪ್ರ ಸಹಾಯವಾಣಿ ವತಿಯಿಂದ ಇಂದು ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ವೇಳೆ ಶ್ರೀರಾಂಪುರದ ನಿವಾಸಿ ಎನ್ ಐ ಇ ಕಾಲೇಜಿನ ಪ್ರೊಫೆಸರ್ ಡಾ.ಸಿ.ಕೆ.ವನಮಾಲ ರವರಿಗೆ ವಿಪ್ರ ಮಹಿಳಾ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ. ಟಿ ಪ್ರಕಾಶ್, ಹಿರಿಯ ಸಮಾಜ ಸೇವಕರಾದ ಕೆ ರಘುರಾಮ್ ವಾಜಪೇಯಿ, ರೂಪದರ್ಶಿ ರೂಪ ಅಯ್ಯರ್,ಸೈಕಲ್ ಪ್ಯೂರ್ ಅಗರಬತ್ತಿ
ಸುಗಂಧ ದ್ರವ್ಯಗಳ ಉದ್ಯಮ ಮುಖ್ಯಸ್ಥರಾದ ಜಾನವಿ ಮೂರ್ತಿ, ಹೊಯ್ಸಳ ಕರ್ನಾಟಕ ಸಂಘದ ಅಧ್ಯಕ್ಷ ಕೆ. ಆರ್ ಸತ್ಯನಾರಾಯಣ್, ವಿಪ್ರ ಮಹಿಳಾ ಸಂಗಮ ಅಧ್ಯಕ್ಷೆ ಡಾ. ಲಕ್ಷ್ಮಿ ದೇವಿ, ಕಿರುತರೆ ನಟ ನಾರಾಯಣಸ್ವಾಮಿ, ಹಿರಿಯ ಪತ್ರಕರ್ತ ಅನಿಲ್ ಕುಮಾರ್ ಮತ್ತಿತರರು ಹಾಜರಿದ್ದರು.


Share this with Friends

Related Post