Thu. Jan 2nd, 2025

ವಿಷ್ಣುವರ್ದನರ ಜೀವನ ಕಿರಿಯ ನಟರಿಗೆ ಮಾದರಿ- ಶ್ರೀವತ್ಸ

Share this with Friends

ಮೈಸೂರು: ಕನ್ನಡ ನಾಡು,ನುಡಿ ಬಗೆಗೆ ಅಪಾರ ಕಳಕಳಿ ಹೊಂದಿದ್ದ ಡಾ. ವಿಷ್ಣುವರ್ಧನ್ ಅವರು ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ಕಲಾವಿದ ಎಂದು ಶಾಸಕ ಟಿ ಎಸ್ ಶ್ರೀವತ್ಸ ಬಣ್ಣಿಸಿದರು.

ನಗರದ ಲಕ್ಷ್ಮಿ ಚಿತ್ರಮಂದಿರದ ಬಳಿ ಸಾಮ್ರಾಟ್ ಡಾಕ್ಟರ್ ವಿಷ್ಣುವರ್ಧನ್ ಸಮಿತಿ ವತಿಯಿಂದ ಸಾಹಸಸಿಂಹ ಡಾಕ್ಟರ್ ವಿಷ್ಣುವರ್ಧನ್ 15ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ,ಅನ್ನಸಂತರ್ಪಣೆಗೆ ಚಾಲನೆ ನೀಡಿ ಅವರು ಮಾತನಾಡಿರು.

ಯುವಜನರಲ್ಲಿ ಭಾಷಾಭಿಮಾನ ಮತ್ತು ದೇಶಾಭಿಮಾನ ಮೂಡಿಸುವಂತಹ ಸದಭಿರುಚಿ ಚಿತ್ರಗಳಲ್ಲಿ ನಟಿಸಿ ಜನಮನ್ನಣೆ ಗಳಿಸಿದ್ದ ವಿಷ್ಣು ಅವರ ಜೀವನ ಕಿರಿಯ ನಟರಿಗೆ ಮಾದರಿ ಎಂದು ಹೇಳಿದರು.

ಈ ವೇಳೆ ಹಿರಿಯ ಸಮಾಜ ಸೇವಕ ಕೆ ರಘುರಾಮ್ ವಾಜಪೇಯಿ, ನಗರ ಪಾಲಿಕೆ ಮಾಜಿ ಸದಸ್ಯ ಎಂ ಡಿ ಪಾರ್ಥಸಾರಥಿ, ಮದನ್, ಪಾಪು, ಟಿ ಎಸ್ ಅರುಣ್, ನವೀನ್, ರಮೇಶ್, ಕುಮಾರ್, ರಾಜು, ರವಿ, ಶ್ರೀಧರ್, ಎಂ ಎನ್ ಚೇತನ್ ಗೌಡ ಮತ್ತಿತರರು ಉಪಸ್ಥಿತರಿದ್ದರು.


Share this with Friends

Related Post