Wed. Dec 25th, 2024

ವಿಶ್ವನಾಥ್ ಕೂಡ ಮುಡಾದಿಂದ ಬದಲಿ ನಿವೇಶನ ಪಡೆದಿದ್ದಾರೆ: ಮರೀಗೌಡ

Share this with Friends

ಮೈಸೂರು, ಜು.8: ವಿಧಾನಪರಿಷತ್ ಸದಸ್ಯ ಎಚ್. ವಿಶ್ವನಾಥ್ ಕೂಡ ಮುಡಾದಿಂದ ಬದಲಿ ನಿವೇಶನ ಪಡೆದಿದ್ದಾರೆ ಎಂದು ಮುಡಾ ಅಧ್ಯಕ್ಷ ಕೆ ಮರೀಗೌಡ ಹೇಳಿದ್ದಾರೆ.

ವಿಶ್ವನಾಥ್ ಅವರ ಪತ್ನಿ ಶಾಂತಮ್ಮ ಅವರ ಹೆಸರಿನಲ್ಲಿ 2017ರಲ್ಲಿ 60×40 ಅಳತೆಯ ಬದಲಿ ನಿವೇಶನ ಪಡೆದಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಮುಡಾ ಹಗರಣ ಪ್ರಕರಣದಲ್ಲಿ ಹಾಲಿ, ಮಾಜಿ ಶಾಸಕರ ಹೆಸರು ಪ್ರಸ್ತಾಪ ಹಿನ್ನೆಲೆಯಲ್ಲಿ ಮುಡಾ ಅಧ್ಯಕ್ಷ ಕೆ ಮರೀಗೌಡ, ಶಾಸಕರಾದ ಕೆ ಹರೀಶ್ ಗೌಡ, ರಮೇಶ್ ಬಂಡಿಸಿದ್ದೇಗೌಡ, ಎಂಎಲ್ ಸಿ ಡಾ ತಿಮ್ಮಯ್ಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ದೇವನೂರು 3ನೇ ಹಂತದ ಬದಲು ಮುಖ್ಯರಸ್ತೆಯಲ್ಲಿ ಎಚ್.ವಿಶ್ವನಾಥ್‌ ನಿವೇಶನ ಪಡೆದಿದ್ದಾರೆ,ವಿಶ್ವನಾಥ್ ಅವರು ಈಗ ರಾಜಕೀಯವಾಗಿ ದಿವಾಳಿಯಾಗಿದ್ದಾರೆ, ಕೀಳು ಮಟ್ಟದ ರಾಜಕಾರಣ ಮಾಡುತ್ತಿದ್ದಾರೆ, ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಮುಡಾದಲ್ಲಿ ‌ನಡೆದಿರುವ ಅಕ್ರಮಗಳ ಬಗ್ಗೆ ಈಗ ಸಚಿವ ಭೈರತಿ ಸುರೇಶ್ ಸೂಚನೆ ಮೇರೆಗೆ ಕೂಲಂಕುಷವಾಗಿಯೇ ತನಿಖೆ ನಡೆಯುತ್ತಿದೆ ಹಾಗಾಗಿ ಈ ಕುರಿತು ಹೆಚ್ಚು ಮಾತನಾಡುವುದಿಲ್ಲ ಎಂದು ತಿಳಿಸಿದರು.

50-50 ಅನುಪಾತದಲ್ಲಿ ಸಿಎಂ ಕುಟುಂಬ ನಿಯಮಬಾಹಿರ ಸೈಟ್ ಪಡೆದ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು ಇಡೀ ಪ್ರಕರಣದಲ್ಲಿ ಸಿಎಂ ಹಾಗೂ ಅವರ ಕುಟುಂಬ ಕಾನೂನಾತ್ಮಕವಾಗಿದೆ ಎಂದು ಸ್ಪಷ್ಟಪಡಿಸಿದರು.

ಇಲ್ಲಿ ಮುಡಾ ಸಿಎಂ ಕುಟುಂಬಕ್ಕೆ 75 ಸಾವಿರ ಚದರ ಅಡಿ ಜಾಗ ಕೊಡಬೇಕಿತ್ತು, ಕೊಟ್ಟಿರುವುದು 38 ಸಾವಿರ ಚದರ ಅಡಿ,ಆದರೂ ನಮ್ಮ ನಾಯಕರು ತೃಪ್ತಿ ಪಟ್ಟುಕೊಂಡಿದ್ದಾರೆ, ಅಂತಹವರ ಮೇಲೆ ಸುಳ್ಳು ಆರೋಪ ಮಾಡುವುದು ಸರಿಯಲ್ಲ ಎಂದು ಶಾಸಕರುಗಳು ಹೇಳಿದರು.

ಈಗ ಆರೋಪ ಮಾಡುತ್ತಿರುವ ಹೆಚ್‌.ವಿಶ್ವನಾಥ್ ಕೂಡ ದೇವನೂರು ಬಡಾವಣೆಯಲ್ಲಿ ಬದಲಿ ನಿವೇಶ ಪಡೆದಿದ್ದಾರೆ ಅವರ ಪತ್ನಿ ಶಾಂತಮ್ಮ ಹೆಸರಲ್ಲಿ.

ನಿವೆಶನ ಸಂಖ್ಯೆ 2,525ರ ಬದಲಾಗಿ ಹೈವೆ ಬಳಿ ಬರುವ ನಿವೇಶನ ಸಂಖ್ಯೆ 307ರನ್ನ ಪಡೆದಿದ್ದಾರೆ. ಅಂತಹವರು ಸಿಎಂ ಬಗ್ಗೆ ಮಾತನಾಡುವಾಗ ಸರಿಯಾಗಿ ಯೋಚಿಸಿ ಮಾತಾಡಬೇಕು ಎಂದು ತಿರುಗೇಟು ನೀಡಿದರು.

ಇಡೀ ಪ್ರಕರಣದಲ್ಲಿ ಅಕ್ರಮ ಎಸಗಿರುವ ಎಲ್ಲರ ಬಗ್ಗೆಯೂ ತನಿಖೆ ನಡೆಯುತ್ತಿದೆ ಸದ್ಯದಲ್ಲೇ ಸತ್ಯಾಸತ್ಯತೆ ಹೊರ ಬರಲಿದೆ ಎಂದು ಶಾಸಕ ಹರೀಶ್‌ಗೌಡ ಮುಡಾ ಅಧ್ಯಕ್ಷ ಮರಿಗೌಡ ತಿಳಿಸಿದರು.


Share this with Friends

Related Post