Mon. Dec 23rd, 2024

ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ: ಸಚಿವರಿಗೆ ಡಿಸಿಎಂ ಸಲಹೆ

Share this with Friends

ಬೆಂಗಳೂರು,ಜು.28: ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಜನರ ಕಷ್ಟಗಳನ್ನು ಆಲಿಸಬೇಕು ಹಾಗೂ ಅಗತ್ಯ ನೆರವುಗಳನ್ನು ಒದಗಿಸಿಕೊಡಬೇಕೆಂದು ಸಚಿವರಿಗೆ ಡಿಸಿಎಂ ಡಿಕೆ ಶಿವಕುಮಾರ್ ಸಲಹೆ ನೀಡಿದ್ದಾರೆ.

ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಜಲ ಸಂಪನ್ಮೂಲ ಸಚಿವರೂ ಆಗಿರುವ ಡಿ.ಕೆ. ಶಿವಕುಮಾರ್ ಈ ರೀತಿ ಹೇಳಿದ್ದಾರೆ.

ರಾಜ್ಯದಲ್ಲಿ ಈ ವರ್ಷ ಭಾರಿ ಮಳೆಯಾಗುತ್ತಿದೆ ಮತ್ತು ಪ್ರವಾಹದಿಂದ ರಾಜ್ಯದ ನದಿಗಳು ಉಕ್ಕಿ ಹರಿಯುತ್ತಿದೆ, ಜಲಾಶಯಗಳು ಭರ್ತಿಯಾಗಿ ನೀರಿನ ಹೊರಹರಿವು ಹೆಚ್ಚಾಗಿ ನೆರೆ ಪರಿಸ್ಥಿತಿ ಎದುರಾಗಿದೆ, ನದಿ ಪಾತ್ರದ ಜನ, ಜಾನುವಾರು, ಆಸ್ತಿ, ಬೆಳೆಗಳಿಗೆ ಹಾನಿಯಾಗುತ್ತಿದೆ ಎಂಬ ವರದಿ ಬರುತ್ತಿದೆ ಹಾಗಾಗಿ ತಕ್ಷಣ ಸಚಿವರು ನೆರೆ ಪೀಡಿತ ಪ್ರದೇಶಗಳಿಗೆ ಹೋಗಬೇಕೆಂದು ಮನವಿ ಮಾಡಿದ್ದಾರೆ.

ಇಂತಹ ಕಷ್ಟದ ಸಮಯದಲ್ಲಿ ಜನರ ಜೊತೆ ನಿಲ್ಲಬೇಕಿರುವುದು ನಮ್ಮ ಸರ್ಕಾರದ ಕರ್ತವ್ಯ. ಹೀಗಾಗಿ ಸಚಿವ ಸಹೋದ್ಯೋಗಿಗಳು ತಮ್ಮ ಕ್ಷೇತ್ರ ವ್ಯಾಪ್ತಿ ಹಾಗೂ ಇತರೆ ಪ್ರವಾಹಪೀಡಿತ ಪ್ರದೇಶಗಳ ಶಾಸಕರ ಜತೆ ಭೇಟಿ ಕೊಟ್ಟು, ಸಂತ್ರಸ್ತರ ಅಹವಾಲುಗಳನ್ನು ಸ್ವೀಕರಿಸಿ ಅವರ ನೆರವಿಗೆ ಧಾವಿಸಬೇಕೆಂದು ಕೋರಿದ್ದಾರೆ.


Share this with Friends

Related Post