Fri. Nov 1st, 2024

ಪ್ರವಾಸ ಕೈಗೊಳ್ಳದೆಜವಾಬ್ದಾರಿಯುತರಾಗಿ ಮತ ಚಲಾಯಿಸಿ

Share this with Friends

ಮೈಸೂರು ಏ.11: ಮತದಾನದ ದಿನದಂದು ರಜೆ ಎಂದು ಪ್ರವಾಸ ಕೈಗೊಳ್ಳದೆ ಜವಾಬ್ದಾರಿಯುತ ನಾಗರಿಕರಾಗಿ ಮತ ಚಲಾಯಿಸುವಂತೆ ನಂಜನಗೂಡು ತಾಲ್ಲೂಕು ಸ್ವೀಪ್ ಸಮಿತಿ ಮನವಿ ಮಾಡಿತು.

ಲೋಕಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ತಾಲ್ಲೂಕು ಪಂಚಾಯಿತಿ ಸ್ವೀಪ್ ಸಮಿತಿ ವತಿಯಿಂದ
ವಿನೂತನ ರೀತಿಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದು, ನಗರದ ರೈಲ್ವೆ ನಿಲ್ದಾಣ ಹಾಗೂ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ಏಪ್ರಿಲ್ 26 ರಂದು ಪ್ರವಾಸ ಕೈಗೊಳ್ಳದೆ ತಪ್ಪದೆ ಮತದಾನ ಮಾಡುವಂತೆ ಜನರಲ್ಲಿ ಅರಿವು ಮೂಡಿಸಲಾಯಿತು.

ಹೆಚ್ಚು ಜನಸಂದಣಿ ಇರುವ ಬಸ್ ನಿಲ್ದಾಣದಲ್ಲಿ ತಮ್ಮ ತಮ್ಮ ಹಳ್ಳಿಗೆ ತೆರಳಲು ಬಸ್ಸಿಗಾಗಿ ಕಾಯುತ್ತಿದ್ದ ಹಿರಿಯರು, ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ವಯೋಮಾನದವರಿಗೆ ಸಮೃದ್ಧ ಮತ್ತು ಸದೃಢ ದೇಶ ಕಟ್ಟಲು ಪ್ರತಿಯೊಬ್ಬರ ಮತವು ಅತ್ಯಮೂಲ್ಯ ಎಂಬುದನ್ನು ಮನದಟ್ಟು ಮಾಡಲಾಯಿತು.

ಇನ್ನೊಂದೆಡೆ ರೈಲು ನಿಲ್ದಾಣದಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸುವ ಜಾಗೃತಿ ಹಾಡು, ಘೋಷವಾಕ್ಯಗಳನ್ನು ಕೇಳಿಸಿ, ಮತದಾನ ದಿನ ರಜೆ ಎಂದು ಭಾವಿಸದೆ ಮತ ಹಾಕುವ ಮೂಲಕ ಚುನಾವಣಾ ಹಬ್ಬವನ್ನು ಆಚರಿಸುವಂತೆ ಕರೆ ನೀಡಲಾಯಿತು.

ಈ ವೇಳೆ ತಾಲ್ಲೂಕು ಸ್ವೀಪ್ ಸಮಿತಿಯ ದಿನೇಶ್, ಬಸವರಾಜು, ರವಿ,ಕಾವ್ಯ ಮತ್ತಿತರ ಅಧಿಕಾರಿಗಳು,ಸಿಬ್ಬಂದಿ ಹಾಜರಿದ್ದರು.


Share this with Friends

Related Post