Sat. Jan 4th, 2025

ಇಂದಿನಿಂದ ಏ. 17 ರವರೆಗೆ ಮನೆಯಲ್ಲೇ ಮತದಾನಕ್ಕೆ ಅವಕಾಶ

Share this with Friends

ಮೈಸೂರು.ಏ.13: 85 ವರ್ಷ ಮೇಲ್ಪಟ್ಟ ಹಿರಿಯನಾಗರೀಕರು ಹಾಗೂ ಶೇ.40 ಕ್ಕಿಂತ ಹೆಚ್ಚಿನ ಅಂಗವಿಕಲತೆ ಇರುವ ಮತದಾರರು ಮನೆಯಲ್ಲಿಯೇ ಇಂದಿನಿಂದ ಏ.17 ರವರೆಗೆ ಮತದಾನ ಮಾಡಬಹುದಾಗಿದೆ.

ಮಡಿಕೇರಿಯಲ್ಲಿ(208) ಏ.15 ರಿಂದ 17 ರವರೆಗೆ , ವಿರಾಜಪೇಟೆ(209) ಏ.15 ರಿಂದ 17ರವರೆಗೆ, ಪಿರಿಯಾಪಟ್ಟಣ(210) ಏ.14 ರಿಂದ 15ರವರೆಗೆ, ಹುಣಸೂರು(212) ಏ.15 ರಿಂದ 16ರವರೆಗೆ, ಚಾಮುಂಡೇಶ್ವರಿ(215) ಏ.13 ರಿಂದ 14ರವರೆಗೆ, ಕೃಷ್ಣರಾಜ(216) ಏ.13 ರಿಂದ 14ರವರೆಗೆ, ಚಾಮರಾಜ(217) ಏ.14 ರಿಂದ 15 ಹಾಗೂ ನರಸಿಂಹರಾಜ(218)ದಲ್ಲಿ ಏ.13 ರಿಂದ 14 ರವರೆಗೆ ಹೋಮ್ ವೋಟಿಂಗ್ ಅವಕಾಶ ಕಲ್ಪಿಸಲಾಗಿದೆ ಎಂದು ಮೈಸೂರು ಜಿಲ್ಲಾಚುನಾವಣಾಧಿಕಾರಿ ಡಾ.ಕೆ.ವಿ ರಾಜೇಂದ್ರ ತಿಳಿಸಿದ್ದಾರೆ.


Share this with Friends

Related Post