Tue. Dec 24th, 2024

ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ ಇಲ್ಲವೋ ಕಾದು ನೋಡಿ:ವಿಜಯೇಂದ್ರ

Share this with Friends

ಮೈಸೂರು, ಆ.10: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೋ ಇಲ್ಲವೋ ಎಂಬುದನ್ನು ಕಾದು ನೋಡಿ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಮಾರ್ಮಿಕವಾಗಿ ನುಡಿದರು.

ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಜಯೇಂದ್ರ ಅವರು ಪೂಜೆ ಸಲ್ಲಿಸಿ ಮೆರವಣಿಗೆ ಪ್ರಾರಂಭಕ್ಕೂ ಮುನ್ನ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ರಾಜ್ಯ ಕಾಂಗ್ರೆಸ್ ವಿರುದ್ಧ ನಡೆಸಿದ ಪಾದಯಾತ್ರೆ ಯಶಸ್ವಿಯಾಗಿದೆ, ಮುಂದಿನ ದಿನಗಳಲ್ಲಿ ಅದರ ಪರಿಣಾಮ ಗೊತ್ತಾಗುತ್ತದೆ, ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿರುವ ಸಮಾವೇಶ ಯಶಸ್ವಿಯಾಗಲಿ ಎಂದು ಆಂಜನೇಯ ಸ್ವಾಮಿಗೆ ಪೂಜೆ ಸಲ್ಲಿಸಿದ್ದೇನೆ ಎಂದು ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷದಿಂದ ರಾಜ್ಯದ ಜನತೆಗೆ ಯಾವುದೇ ಪ್ರಯೋಜನವಾಗುತ್ತಿಲ್ಲ ಈ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಲು ನಾವು ಈ ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದೆವು, ಅದು ಯಶಸ್ವಿಯಾಗಿದೆ.

ಹಾಗಾಗಿ ಸಮಾವೇಶ ನಡೆಸುವ ಮೂಲಕ ನಾಡಿನ ಜನತೆಗೆ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಾಗೂ ಅವರು ನಡೆಸುತ್ತಿರುವ ದುರಾಡಳಿತ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ವಿಜಯೇಂದ್ರ ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವುದಿಲ್ಲ ಎಂದು ಹೇಳುತ್ತಿದ್ದಾರಲ್ಲ ಎಂಬ ಪ್ರಶ್ನೆಗೆ ಪ್ರತಿಕ್ಇಯಿಸಿದ ಅವರು,ರಾಜೀನಾಮೆ ನೀಡುತ್ತಾರೋ ಇಲ್ಲವೋ ಎಂಬುದನ್ನು ನೀವೇ ಕಾದು ನೋಡಿ ಎಂದು ಮಾರ್ಮಿಕವಾಗಿ ನುಡಿದರು.

ನಮ್ಮ ಪಾದಯಾತ್ರೆಯ ಪರಿಣಾಮದಿಂದ ಸಿಎಂ ಮುಂದಿನ ದಿನದಲ್ಲಿ ರಾಜೀನಾಮೆ ನೀಡಲೇ ಬೇಕಾಗುವ ಪರಿಸ್ಥಿತಿ ಬಂದೇ ಬರುತ್ತದೆ ಎಂದು ಹೇಳಿದರು.

ಆಂಜನೇಯ ಸ್ವಾಮಿಗೆ ಪೂಜೆ ಸಲ್ಲಿಸುವ ವೇಳೆ ಮಾಜಿ ಶಾಸಕ ನಾಗೇಂದ್ರ ಮತ್ತಿತರರು ಉಪಸ್ಥಿತರಿದ್ದರು.


Share this with Friends

Related Post