Fri. Mar 6th, 2026

ನಾವು ಆರ್ ಎಸ್ಎಸ್ ನಿಯಂತ್ರಿಸುವುದಾಗಿ ಹೇಳಿಲ್ಲ:ಡಿಸಿಎಂ ಡಿಕೆ ಶಿವಕುಮಾರ್

Share this with Friends

ನವದೆಹಲಿ:ನಾವು ಎಲ್ಲಿಯೂ ಆರ್ ಎಸ್ಎಸ್ ನಿಯಂತ್ರಿಸುವುದಾಗಿ ಹೇಳಿಲ್ಲ,ಎಲ್ಲರಿಗೂ ಅನ್ವಯವಾಗುವ ಸರ್ಕಾರಿ ಆದೇಶವನ್ನು ಪುನರುಚ್ಚರಿಸಿದ್ದೇವೆ ಅಷ್ಟೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾವು ಆರ್ ಎಸ್ಎಸ್ ನಿಯಂತ್ರಿಸುತ್ತೇವೆ ಎಂದು ಎಲ್ಲಿ ಹೇಳಿದ್ದೇವೆ? ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಪಡೆಯಬೇಕು ಎಂದು ಹೇಳಿದ್ದೇವೆ. ಇದು ಎಲ್ಲರಿಗೂ ಅನ್ವಯವಾಗಲಿದ್ದು, ನಾವು ಆರ್ ಎಸ್ಎಸ್ ಸುದ್ದಿ ಎಲ್ಲಿ ಪ್ರಸ್ತಾಪಿಸಿದ್ದೇವೆ? ಈ ವಿಚಾರ ಸಾರ್ವಜನಿಕ ಚರ್ಚೆಯಲ್ಲಿತ್ತು. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಪತ್ರದ ಆದೇಶದಂತೆ ಯಾರೇ ಕಾರ್ಯಕ್ರಮ ಮಾಡಬೇಕಾದರೂ ಅನುಮತಿ ಪಡೆಯಬೇಕು ಎಂದು ಸರ್ಕಾರ ಸೂಚಿಸಿದೆ. ಆರ್ ಎಸ್ಎಸ್ ಕಾರ್ಯಕ್ರಮ ಮಾಡಬಾರದು ಎಂದು ನಾವು ಎಲ್ಲಿ ಹೇಳಿದ್ದೇವೆ?” ಎಂದು ತಿಳಿಸಿದರು.

ಹೈಕೋರ್ಟ್ ಆದೇಶದಿಂದ ಸರ್ಕಾರಕ್ಕೆ ಹಿನ್ನಡೆಯಾಗಿದೆಯೇ ಎಂದು ಕೇಳಿದಾಗ, “ಸರ್ಕಾರಕ್ಕೆ ಹಿನ್ನಡೆ ಎಂದೇನೂ ಇಲ್ಲ. ನಮ್ಮ ಕಾನೂನು ತಂಡದ ಜತೆ ಕೂತು ಚರ್ಚೆ ಮಾಡುತ್ತೇವೆ. ನಾವು ನ್ಯಾಯಾಲಯಕ್ಕೆ ಗೌರವ ನೀಡುತ್ತೇವೆ” ಎಂದರು.

“ಕಾವೇರಿ (ಮೇಕೆದಾಟು ಯೋಜನೆ) ವಿಚಾರವಾಗಿ ಪ್ರತ್ಯೇಕ ಪೀಠ ರಚಿಸುವುದಾಗಿ ಹೇಳುತ್ತಿದ್ದಾರೆ. ಇದಕ್ಕೆ ದಿನಾಂಕ ನಿಗದಿ ಮಾಡಲಿದ್ದು, ರಾಜ್ಯಕ್ಕೆ ನ್ಯಾಯ ಸಿಗಲಿ ಎಂದು ಪ್ರಾರ್ಥನೆ ಮಾಡೋಣ” ಎಂದರು.

ಮತಗಳ್ಳತನ ವಿರುದ್ಧದ ಸಹಿಸಂಗ್ರಹ ಅಭಿಯಾನದಲ್ಲಿ ಸಕ್ರಿಯರಾಗದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: 

“ಮತಗಳ್ಳತನ ವಿರುದ್ಧ ಕರ್ನಾಟಕದಲ್ಲಿ ಸಹಿಸಂಗ್ರಹ ಅಭಿಯಾನದಲ್ಲಿ ಸಕ್ರಿಯರಾಗದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಸಿದ್ದಾರೆ.

ಈ ಅಭಿಯಾನದಲ್ಲಿ ಯಾರು ಕೆಲಸ ಮಾಡಿಲ್ಲವೋ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ಸಹಿಸಂಗ್ರಹ ಅಭಿಯಾನದಲ್ಲಿ ಸರಿಯಾಗಿ ಜವಾಬ್ದಾರಿ ನಿಭಾಯಿಸದವರನ್ನು ಅವರ ಹುದ್ದೆಯಿಂದ ಕಿತ್ತೊಗೆಯಿರಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಸೂಚಿಸಿದ್ದಾರೆ. ಈ ವಿಚಾರವಾಗಿ ಮುಖ್ಯಮಂತ್ರಿಗಳ ಜೊತೆಗೂ ಚರ್ಚೆ ಮಾಡುವೆ, ಶಾಸಕರಿಗೂ ತಿಳಿಸುವೆ. ಮತಗಳ್ಳತನ ರಾಷ್ಟ್ರ ಮಟ್ಟದ ಗಂಭೀರ ವಿಚಾರವಾಗಿದ್ದು, ನಮ್ಮ ರಾಜ್ಯದಲ್ಲಿ ಈಗಾಗಲೇ 70-80 ಲಕ್ಷ ಸಹಿ ಸಂಗ್ರಹ ಮಾಡಲಾಗಿದೆ. ಕೆಲವು ಶಾಸಕರು ಹಾಗೂ ಬ್ಲಾಕ್ ಕಾಂಗ್ರೆಸ್ ನವರು ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ, ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ. ನಾನು ನನ್ನ ವರದಿ ನೀಡುತ್ತೇನೆ. ಬ್ಲಾಕ್ ಅಧ್ಯಕ್ಷರನ್ನು ವಜಾಗೊಳಿಸಲು ನನಗೆ ಅಧಿಕಾರವಿದೆ. ಶಾಸಕರ ವಿಚಾರವಾಗಿ ಮುಖ್ಯಮಂತ್ರಿಗಳಿಗೆ ತಿಳಿಸುತ್ತೇವೆ. ಎಐಸಿಸಿ ನಾಯಕರು ಸೂಚನೆ ನೀಡುತ್ತಾರೆ” ಎಂದರು.


Share this with Friends

Related Post