Fri. Mar 6th, 2026

ಹೈಕಮಾಂಡ್ ಆಹ್ವಾನಿಸಿದರೆ ಮಾತ್ರ ದೆಹಲಿ ಭೇಟಿ: ಡಿಸಿಎಂ ಡಿ.ಕೆ. ಶಿವಕುಮಾರ್

Share this with Friends

ಬೆಂಗಳೂರು:ಇಂದು ಕಾರ್ಯಕ್ರಮ ನಿಮಿತ್ತ ಮುಂಬೈಗೆ ತೆರಳುತ್ತಿದ್ದೇನೆಯೇ ಹೊರತು ಹೈಕಮಾಂಡ್ ನಾಯಕರ ಭೇಟಿಗಾಗಿ ಅಲ್ಲ, ಹೈಕಮಾಂಡ್ ಕರೆದರೆ ಆಗ ನಾವು ಅವರ ಭೇಟಿಗೆ ತೆರಳುತ್ತೇವೆ ಎಂದು ಡಿಸಿಎಮನ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದ ಬಳಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು,ಹೈಕಮಾಂಡ್ ನಿರ್ಧಾರವನ್ನು ಎಲ್ಲರೂ ಒಪ್ಪುತ್ತೇವೆ ಎಂದು ಈಗಾಗಲೇ ಸಾಕಷ್ಟು ಬಾರಿ ಸ್ಪಷ್ಟಪಡಿಸಿದ್ದು ಈಗಲೂ ಅದನ್ನೇ ಪುನರುಚ್ಚೆರಿಸುತ್ತಿದ್ದೇನೆ,ಸಿಎಂ ಹಾಗೂ ಡಿಸಿಎಂ ಇಬ್ಬರನ್ನೂ ದಿಲ್ಲಿಗೆ ಕರೆದು ಚರ್ಚೆ ಮಾಡುತ್ತೇವೆ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ, ಹೈಕಮಾಂಡ್ ನನ್ನನ್ನು ಹಾಗೂ ಮುಖ್ಯಮಂತ್ರಿಗಳನ್ನು ಕರೆದರೆ ನಾವು ಮಾತನಾಡಿಕೊಂಡು ದೆಹಲಿಗೆ ಹೋಗುತ್ತೇವೆ” ಎಂದರು.

ಇದುವರೆಗೂ ಕರೆದಿಲ್ಲ:

“ಇದುವರೆಗೂ ಯಾರೂ ನನ್ನನ್ನು ದೆಹಲಿಗೆ ಕರೆದಿಲ್ಲ, ಚರ್ಚೆಗೆ ಆಹ್ವಾನ ‌ನೀಡಿಲ್ಲ. ಇಂದಿರಾ ಗಾಂಧಿ ಅವರು ಆರಂಭಿಸಿದ ಅಂಗನವಾಡಿ ಯೋಜನೆಯ 50 ವರ್ಷದ ಕಾರ್ಯಕ್ರಮವಿದೆ. ಮುಂಬೈನಲ್ಲಿ ನನಗೆ ಖಾಸಗಿ ಕಾರ್ಯಕ್ರಮವಿದ್ದು, ಅಲ್ಲಿಗೆ ಹೋಗಿ ಇಂದೇ (ಗುರುವಾರ) ಮರಳುತ್ತೇನೆ” ಎಂದು ತಿಳಿಸಿದರು.


Share this with Friends

Related Post