Mon. Dec 23rd, 2024

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಅಧಿಕ‌ ಮತದಿಂದ ಗೆಲ್ಲುವ ವಿಶ್ವಾಸವಿದೆ: ಅಣ್ಣಾ ಸಾಹೇಬ ಜೊಲ್ಲೆ

Share this with Friends

ಚಿಕ್ಕೋಡಿ: ಕಳೆದ ಬಾರಿಗಿಂತಲೂ ಈ ಬಾರಿ ಅಧಿಕ ಮತಗಳಿಂದ ಗೆಲ್ಲುವ ವಿಶ್ವಾಸ ಚಿಕ್ಕೋಡಿ ಲೋಕಸಭಾ ಬಿಜೆಪಿ ಅಭ್ಯರ್ಥಿಯಾದ ಅಣ್ಣಾಸಾಹೇಬ ಜೊಲ್ಲೆಯವರು ವ್ಯಕ್ತಪಡಿಸಿದರು.

ನಗರದಲ್ಲಿ ಬಿಜೆಪಿ ಪಕ್ಷದ ಕಚೇರಿಯಲ್ಲಿ ಭಾನುವಾರ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು ಲೋಕಸಭೆ ಚುನಾವಣೆಗೆ ಬಿಜೆಪಿ ಪಕ್ಷ ಚಿಕ್ಕೋಡಿ ಕ್ಷೇತ್ರದಿಂದ ಅಭ್ಯರ್ಥಿಯನ್ನಾಗಿ ಎರಡನೇ ಬಾರಿಗೆ ನನ್ನನ್ನು ಆಯ್ಕೆ ಮಾಡಿತ್ತು. ಕಳೆದ ಐವತ್ತು ದಿನಗಳಿಂದ ಪ್ರಚಾರ ಕಾರ್ಯದಲ್ಲಿ‌ ತೋಡಗಿದ್ದೇವೆ. ಈ ಬಾರಿಯು ಕೂಡ ಕ್ಷೇತ್ರದಲ್ಲಿ ಉತ್ತಮ ಪ್ರತಿಕ್ರಿಯೆ ದೊರಕಿದೆ ಎಂದರು

ಮತ್ತೊಮ್ಮೆ ಮೋದಿಯವರನ್ನು ಪ್ರಧಾನಿ ಮಾಡುವ ಸಂಕಲ್ಪ ಈ ಭಾಗದ ಮತದಾರರು ಹೊಂದಿದ್ದು ಹೀಗಾಗಿ ಈ ಬಾರಿಯೂ ಚಿಕ್ಕೋಡಿಯಲ್ಲಿ ಬಿಜೆಪಿ ಗೆಲುವು ಶತಸಿದ್ದ. ಮತದಾರರಲ್ಲಿ ಮತದಾನದ ದಿನಾಂಕದವರೆಗೂ ಇದೇ ಉತ್ಸಾಹವಿರಲಿ. ಕಾಂಗ್ರೆಸ್ ಶಾಸಕರು ಹೊಂದಿರುವ ಕ್ಷೇತ್ರಗಳಲ್ಲಿ ಬಿಜೆಪಿಗೆ ಅತೀ ಹೆಚ್ಚು ಲೀಡ್ ಸಿಗಲಿದೆ. ಕಾಂಗ್ರೆಸ್‌ನ ಐದು ಗ್ಯಾರಂಟಿಗಳಿಗಿಂತಲೂ ಪ್ರಧಾನಿ ಮೋದಿಯವರ ಅಭಿವೃದ್ದಿ ಕಾರ್ಯಗಳು ಬಿಜೆಪಿಗೆ ವರದಾನವಾಗಲಿ ಎಂದು ಹೇಳಿದರು.

ಬಂಬಲವಾಡ ಗ್ರಾಮದ ಬಿಜೆಪಿ ಪರ ಅಪಪ್ರಚಾರ ಮಾಡಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ಇಷ್ಟು ಕೀಳುಮಟ್ಟದ ರಾಜಕೀಯ ಮಾಡಬಾರದು. ಗೋಕಾಕ ರಾಜಕಾರಣ ಚಿಕ್ಕೋಡಿಯಲ್ಲಿ ನಡೆಯಲ್ಲ ಎಂದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮಾತನಾಡಿ ಕಾಂಗ್ರೆಸ್ ನಾಯಕರಲ್ಲಿ ಏಕತೆ ಕಾಣ್ತಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ನೇತೃತ್ವ ಹಾಗೂ ಸಮಗ್ರ ದೇಶದ ಚಿಂತನೆ ಕುರಿತಂತೆ ವಿಫಲವಾಗಿದೆ. ಇಂಡಿ ಒಕ್ಕೂಟದವರು ಪ್ರಧಾನಮಂತ್ರಿ ಅಭ್ಯರ್ಥಿ ಯಾರು ಅಂತಾ ಘೋಷನೆ ಮಾಡಿಲ್ಲ. ನೂರು ವರ್ಷಗಳ ಇತಿಹಾಸವಿರುವ ಕಾಂಗ್ರೆಸ್‌ಗೆ ಕ್ಷೇತ್ರಗಳಲ್ಲಿ ಅಭ್ಯರ್ಥಿ ಸಿಕ್ಕಿಲ್ಲ ಕಾಂಗ್ರೆಸ್‌ಗೆ ಹಾಗೂ ವಿರೋಧ ಪಕ್ಷದವರಿಗೆ ನಿಂತ ನೆಲ ಕುಸಿದಂತಾಗಿದೆ. ಅಣ್ಣಾಸಾಹೇಬ್ ಜೊಲ್ಲೆ ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆಂಬ ವಿಶ್ವಾಸವಿದೆ ಎಂದರು.

ಈ ಸಂದರ್ಭದಲ್ಲಿ ಶಾಸಕಿ ಶಶಿಕಲಾ ಜೊಲ್ಲೆ, ಚಿಕ್ಕೋಡಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ ಅಪ್ಪಾಜಿಗೋಳ, ದುಂಡಪ್ಪ ಬೆಂಡವಾಡೆ, ಸಿದ್ದು ನರಾಟೆ, ಸುನೀಲ ಪಾಟೀಲ, ರಾಜೇಂದ್ರ ಗುಂದೆಶಾ ಸೇರಿದಂತೆ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.


Share this with Friends

Related Post