ಬೆಂಗಳೂರು, ಮಾ.27: ಇಂದು ವಿಶ್ವ ರಂಗಭೂಮಿ ದಿನಾಚರಣೆ ಕಲಾವಿದರು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಂಭ್ರಮಿಸಿದರು.
ಕರ್ನಾಟಕ ಚಲನಚಿತ್ರ ಪೋಷಕ ಕಲಾವಿದರ ಸಂಘದ ಸದಸ್ಯರು ಕೂಡಾ ವಿಶ್ವ ರಂಗಭೂಮಿ ದಿನಾಚರಣೆಯ ಪ್ರಯುಕ್ತ ಬೆಂಗಳೂರಿನ ಗಾಂಧಿನಗರದ ಗುಬ್ಬಿ ವೀರಣ್ಣ ರಂಗ ಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಂಡು ಸಂಭ್ರಮಿಸಿದರು.
ಈ ವೇಳೆ ಕರ್ನಾಟಕ ಚಲನಚಿತ್ರ ಪೋಷಕ ಕಲಾವಿದರ ಸಂಘದ ಅಧ್ಯಕ್ಷ ಡಿoಗ್ರಿ ನಾಗರಾಜ್ ಮಾತನಾಡಿ, ಇತ್ತೀಚಿನ ವರ್ಷಗಳಲ್ಲಿ ರಂಗಭೂಮಿ ಕಲೆ ಕಣ್ಮರೆಯಾಗುತ್ತಿದೆ ಎಂದು ವಿಷಾದಿಸಿದರು.
ವಿಶ್ವ ರಂಗಭೂಮಿ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಿ ನಾವಿನ್ನೂ ಅಸ್ಥಿತ್ವದಲ್ಲಿದ್ದೇವೆ ಎಂಬುದನ್ನು ಕಲಾಪ್ರಿಯರಿಗೆ ತೋರಿಸಿಕೊಡಬೇಕು ಎಂದು ಕರೆ ನೀಡಿದರು.
ಕೆಲ ಕಲಾವಿದರು ಶ್ರೀಕೃಷ್ಣಣ ವೇಷ,ಮುನಿಗಳ ವೇಷ ತೊಟ್ಟು ಗಮನ ಸೆಳೆದರು.ಇದೇ ವೇಳೆ ಹಿರಿಯ ಕಲಾವಿಧರನ್ನು ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಸಂಘದ ಪ್ರಧಾನ ಕಾರ್ಯದರ್ಶಿ
ನವನೀತo ಸೇರಿದಂತೆ ಸದಸ್ಯರು,ಕಲಾವಿದರು ಗುಬ್ಬಿ ವೀರಣ್ಣ ರಂಗಮಂದಿರದ ಮೆಟ್ಟಿಲು ಗಳ ಮೇಲೆ ಭಿತ್ತಿಪತ್ರಗಳನ್ನು ಹಿಡಿದು ಸ್ವಾಗತ ಕೋರಿದರು.