ಬೆಂಗಳೂರು, ಜೂನ್,4: ತೀವ್ರ ಕುತೂಹಲ ಕೆರಳಿಸಿದ್ದ ಮೈಸೂರು, ಕೊಡಗು ಲೋಕಸಭಾ ಚುನಾವಣೆಯಲ್ಲಿ ಮೈಸೂರು ರಾಜಮನೆತನದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಅವರು ಪ್ರತಿಷ್ಠಿತ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ ವಿರುದ್ಧ 1.30 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ.
32 ವರ್ಷದ ಯದುವೀರ್ ಅವರಿಗೆ ಸಂಸದರಾಗಿದ್ದ ಪ್ರತಾಪ್ ಸಿಂಹ ಅವರ ಬದಲಿಗೆ ಬಿಜೆಪಿ ಎನ್ ಡಿ ಎ ಅಭ್ಯರ್ಥಿಯಾಗಿ ಟಿಕೆಟ್ ನೀಡಿತ್ತು.
ಮೈಸೂರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಾಗಿರುವುದರಿಂದ ಯದುವೀರ್ ಮತ್ತು ಲಕ್ಷ್ಮಣ ನಡುವೆ ಜಿದ್ದಾಜಿದ್ದಿ ಸ್ಪರ್ಧೆ ಏರ್ಪಟ್ಟಿತ್ತು,ಜತೆಗೆ ವ್ಯಾಪಕ ಗಮನ ಸೆಳೆದಿತ್ತು.
ಎರಡು ದಶಕಗಳ ನಂತರ ಮೈಸೂರು ರಾಜಮನೆತನ ಚುನಾವಣಾ ರಾಜಕೀಯಕ್ಕೆ ಮರಳಿದ್ದು ಯದುವೀರ್ ತಮ್ಮ ತಂದೆ ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್ ಅವರಂತೆ ಸಂಸತ್ ಪ್ರವೇಶಿಸಿದ್ದಾರೆ.