ಮೈಸೂರು: ಡ್ರಗ್ಸ್ ವಿರುದ್ಧ ಸರ್ಕಾರ ಸಮರ ಸಾರಿದೆ,ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಡ್ರಗ್ಸ್ ವಿರುದ್ಧ ಸರ್ಕಾರ ಸಮರ ಸಾರಿದೆ,ಎಲ್ಲ ಕಡೆ ಕಡಿವಾಣ ಹಾಕಲು ತೀರ್ಮಾನ ಮಾಡಿದ್ದೇವೆ ಎಂದು ಹೇಳಿದರು.
ಬೆಂಗಳೂರಿನಲ್ಲಿ ಚಾಕಲೇಟ್ ರೂಪದಲ್ಲಿ ಡ್ರಗ್ಸ್ ಸಿಗುತ್ತಿರುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವರು, ಆನೇಕಲ್ ಕಡೆ ಮಾರಾಟ ಆಗ್ತಿದೆ ಎಂಬ ಮಾಹಿತಿ ಸಿಕ್ಕಿದೆ, ಎಲ್ಲ ಕಡೆ ಡ್ರಗ್ಸ್ ತಡೆಯುವಲ್ಲಿ ಪ್ರಯತ್ನ ನಡೀತಿದೆ ಎಂದು ತಿಳಿಸಿದರು.
ಶಾಲಾ, ಕಾಲೇಜು ಹುಡುಗರಿಗೆ ಸಪ್ಲೈ ಆಗ್ತಿದೆ ಎಂಬ ಆರೋಪವಿದೆ. ಮೆಡಿಕಲ್ ಶಾಪ್ ಗಳಲ್ಲಿ ಸಿಕ್ಕರೆ ಲೈಸನ್ಸ್ ರದ್ದು ಮಾಡಲು ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಸಿದರು.
ಕೋವಿಡ್ ಹಗರಣದ ಬಗ್ಗೆ ತನಿಖೆ ನಡೆಯುತ್ತಿದೆ. ಕೋಟಿಗಟ್ಟಲೇ ಹಗರಣ ಆಗಿದೆ. ಮೆಡಿಸಿನ್ ಡ್ರಗ್ಸ್ ಖರೀದಿಯಲ್ಲಿ ಅಕ್ರಮ ಆಗಿದೆ. ಇದೆಲ್ಲದರ ರಿಪೋರ್ಟ್ ಬಂದ ಬಳಿಕ ಕ್ರಮ ಆಗಲಿದೆ ಎಂದು ಪರಮೇಶ್ವರ್ ತಿಳಿಸಿದರು.